ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈ ಕಮಾಂಡ್ ನಿಯಂತ್ರಿಸುತ್ತಿದೆ : ಬೊಮ್ಮಾಯಿ

ಬೆಂಗಳೂರು

      ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈ ಕಮಾಂಡ್ ದೆಹಲಿಯಿಂದ ನಿಯಂತ್ರಿಸುತ್ತಿದ್ದು, ಇದು ಪ್ರಜಾಪ್ರಭುತ್ವದ ವಿರೋಧಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

     ಮಾಧ್ಯಮದವರೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಿನ್ನೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಇಡೀ ಸಂಪುಟ ದೆಹಲಿಗೆ ಹೋಗಿ ಪಕ್ಷದ ಸಭೆ ನಡೆಸಿರುವುದು ಇತಿಹಾಸದಲ್ಲಿ ನಡೆದಿರುವುದಿಲ್ಲ. ಇದು ಪ್ರಜಾಪ್ರಭುತ್ವದ ವಿರೋಧಿ ನಡೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡದ ಅಸ್ಮಿತೆಗೆ ಧಕ್ಕೆ ತಂದಿದ್ದಾರೆ ಎಂದು ಅವರು ಹೇಳಿದ್ದಾರೆ.

     ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ್ದು, 34 ಸಾವಿರ ಕೋಟಿ ಅನುದಾನದಲ್ಲಿ ಸುಮಾರು 13 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ದುರ್ಬಲ ವರ್ಗದವರ ಅಭಿವೃದ್ಧಿಗೆ ಹೊಡೆತ ಬೀಳಲಿದೆ ಎಂದು ಅವರು ದೂರಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ