ರಾತ್ರೋರಾತ್ರಿ ಮಾರಕಾಸ್ತ್ರಗಳಿಂದ ರೌಡಿಶೀಟರ್ ನಾಗನ ಬರ್ಬರ ಹತ್ಯೆ

ಬೆಂಗಳೂರು:

   ರೌಡಿಶೀಟರ್ ನ ಬರ್ಬರ ಹತ್ಯೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಂಚೇಪಾಳ್ಯ ನಾಗ ಕೊಲೆಯಾದ ರೌಡಿಶೀಟರ್ ಆಗಿದ್ದಾನೆ. ರಾತ್ರೋರಾತ್ರಿ ಮುತ್ತುರಾಯನಗರ ಸಮೀಪದ ರೈಲ್ವೇ ಟ್ರಾಕ್ ಸಮೀಪ ಎದುರಾಳಿ ಗ್ಯಾಂಗ್‌ವೊಂದು ಅಟ್ಯಾಕ್‌ ಮಾಡಿ ಕೊಂದು ಹಾಕಿದ್ದಾರೆ.

   ಮುಖಮೂತಿ ನೋಡದೆ ಮಾರಕಾಸ್ತ್ರಗಳಿಂದ ರೌಡಿ ನಾಗನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಮಾರಣಾಂತಿಕ ಹಲ್ಲೆಯಿಂದಾಗಿ ತೀವ್ರ ರಕ್ತಸ್ರಾವವಾಗಿ ನಾಗ ಬೀದಿ ಹೆಣವಾಗಿದ್ದಾನೆ. ಸ್ಥಳೀಯರ ಮಾಹಿತಿ ಮೇರೆಗೆ ಜ್ಞಾನಭಾರತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

   ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಕೊಲೆಗಾರರಿಗಾಗಿ ತನಿಖೆಯನ್ನು ನಡೆಸಲಾಗುತ್ತಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ