ರಾಮನಗರ:
ವಿಷ ಕುಡಿದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆಯಲ್ಲಿ ಇದು ಆತ್ಮಹ*ತ್ಯೆ ಅಲ್ಲ, ಕೊಲೆ ಎಂದು ತಿಳಿದು ಬಂದಿದ್ದು, ಪತ್ನಿಯ ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಗಂಡನನ್ನೇ ಸುಪಾರಿ ಕೊಟ್ಟು ಗ್ರಾ.ಪಂ ಸದಸ್ಯೆ ಕೊಲೆ ಮಾಡಿಸಿರುವುದು ಬೆಳಕಿಗೆ ಬಂದಿದೆ.
ಕಳೆದ ಜೂ. 24ರಂದು ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದೊಡ್ಡಿ ಗ್ರಾಮದಲ್ಲಿ ಗ್ರಾ.ಪಂ ಸದಸ್ಯೆ ಚಂದ್ರಕಲಾ ಪತಿ ಲೋಕೇಶ್ (45) ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಲೋಕೇಶ್ ಶವದ ಬಳಿ ವಿಷದ ಬಾಟಲಿ ಇಟ್ಟು, ಸೂಸೈಡ್ ಎಂದು ಬಿಂಬಿಸಲಾಗಿತ್ತು. ಈ ಸಂಬಂಧ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಳಿಕ ಚಂದ್ರಕಲಾ ತಾನೇ ಸುದ್ದಿಗೋಷ್ಠಿ ನಡೆಸಿ, ಪತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಳು. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಚಂದ್ರಕಲಾ ಫೋನ್‌ನಿಂದ ಆಕೆಯ ಅನೈತಿಕ ಸಂಬಂಧದ ಮಹತ್ವದ ಸುಳಿವು ಸಿಕ್ಕಿತ್ತು.
ಯೋಗೇಶ್ ಎಂಬಾತನೊಂದಿಗೆ ಚಂದ್ರಕಲಾ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇದಕ್ಕೆ ಪತಿ ಅಡ್ಡಿಯಾಗಿದ್ದ ಹಿನ್ನೆಲೆ ಪ್ರಿಯಕರನ ಜೊತೆ ಸೇರಿ ಗಂಡ ಕೊಲೆಗೆ ಸ್ಕೆಚ್ ಹಾಕಿದ್ದಳು. ಬೆಂಗಳೂರಿನ ನಾಲ್ವರು ಸುಫಾರಿ ಕಿಲ್ಲರ್‌ಗಳಿಗೆ ಹಣ ಕೊಟ್ಟ ಈ ಮಹಿಳೆ, ಪತಿಯ ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ
