ರಾಯಚೂರು:
ನಗರದ ಪಶ್ಚಿಮ ಪೊಲೀಸ್ ಠಾಣೆಯ ಮೂರು ಜನ ಪೊಲೀಸ್ ಕಾನ್ಸ್ ಟೆಬಲ್ ಗಳಿಗೆ ಕೊರೊನಾ ವೈರಸ್ ಸೋಂಕು ಧೃಡಪಟ್ಟಿದೆ.
ಪೊಲೀಸ್ ಕಾನ್ಸ್ ಟೆಬಲ್ ಗಳು 25 ರಿಂದ 30 ವರ್ಷದವರಾಗಿದ್ದು, ಕೃಷಿ ವಿಶ್ವವಿದ್ಯಾಲಯದ ಕ್ವಾರಂಟೈನ್ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕೊರೊನಾ ವೈರಸ್ ಸೋಂಕು ವಕ್ಕರಿಸಿದೆ.
ಮಹಾರಾಷ್ಟ್ರದಿಂದ ಬಂದಿರುವ ವಲಸಿಗರು ವಿಶ್ವವಿದ್ಯಾಲಯದಲ್ಲಿ ಕ್ವಾರಂಟೈನ್ ಇದ್ದರು. ಪೊಲೀಸ್ ಕಾನ್ಸ್ ಟೆಬಲ್ ಗಳಿಗೆ ಕೋವಿಡ್-19 ಪತ್ತೆಯಾಗಿರುವುದರಿಂದ ಅವರೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಹಂತದಲ್ಲಿ ಸಂಪರ್ಕದಲ್ಲಿರುವವರಿಗಾಗಿ ಮಾಹಿತಿ ಪಡೆಯಲಾಗುತ್ತಿದೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆಗೆ ಸ್ಯಾನಿಟೆಜ್ ಮಾಡಿಸಲು ಕ್ರಮಕೈಗೊಳ್ಳಲಾಗುವುದು. ಆದ್ದರಿಂದ ಪಶ್ಚಿಮ ಠಾಣೆಯ ಸರಹದ್ದಿನ ದೂರುದಾರರು ತಾತ್ಕಾಲಿಕವಾಗಿ ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರುಗಳನ್ನು ನೀಡಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಸಿ.ಬಿ.ವೇದಮೂರ್ತಿತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
