ರಾಯಚೂರು:
ಪುಲ್ವಾಮಾದಲ್ಲಿ ನಡೆದ ಸೈನಿಕರ ಹತ್ಯೆಯನ್ನ ಕಿಡಿಗೇಡಿಗಳ ಗುಂಪು ಬಣ್ಣ ಎರಚಿಕೊಂಡು ಸಂಭ್ರಮಿಸಿ ಕೇಕೆ ಹಾಕಿದ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ತಲೆಖಾನ್ ಗ್ರಾಮದಲ್ಲಿ ನಡೆದಿದೆ.
ಕೆಲ ಕಿಡಿಗೇಡಿ ಮುಸ್ಲಿಂ ಯುವಕರು ತಡರಾತ್ರಿ ಪರಸ್ಪರ ಹಸಿರು ಬಣ್ಣ ಎರಚಾಡಿಕೊಂಡು, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವಿಚಾರ ಗ್ರಾಮಸ್ಥರಿಗೆ ತಿಳಿದು ಸ್ಥಳಕ್ಕೆ ಬರುವಷ್ಟರಲ್ಲಿ ಯುವಕರು ಅಲ್ಲಿಂದ ಪರಾರಿಯಾಗಿದ್ದಾರೆ. ಯುವಕರು ಸಂಭ್ರಮಾಚರಣೆ ನಡೆಸಿರುವ ಗುರುತಾಗಿ ಸ್ಥಳದಲ್ಲಿ ಹಸಿರು ಬಣ್ಣ ಮತ್ತು ಪಟಾಕಿ ಬಾಕ್ಸ್ ಕೂಡ ಪತ್ತೆಯಾಗಿದೆ. ವಿಜಯೋತ್ಸವ ಆಚರಣೆ ಮಾಡಿ ಸಮಾಜದಲ್ಲಿ ಕೋಮುಗಲಭೆ ಉಂಟಾಗುವಂತೆ ಮಾಡುವ ಕಾರ್ಯ ಮಾಡಿದವ ಯುವಕರ ಬಂಧನಕ್ಕೆ ಆಗ್ರಹಿಸಿ ವಿವಿಧೆಡೆಯಿಂದ ಹಿಂದೂಪರ ಸಂಘಟನೆಗಳು ಮತ್ತು ಗ್ರಾಮಸ್ಥರು ಆಗಮಿಸಿ, ಬೈಕ್ ರ‍್ಯಾಲಿ ನಡೆಸಿ ಪ್ರತಿಭಟಿಸಿದ್ದಾರೆ.
ಅಲ್ಲದೇ ಘಟನೆಯಿಂದ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ಹಾಗೂ ಗ್ರಾಮಸ್ಥರು ಮಸೀದಿ ಧ್ವಂಸ ಮಾಡಲು ಮುಂದಾಗಿದ್ದರು. ಪೊಲೀಸರು ಲಘು ಲಾಠಿ ಚಾರ್ಜ್ ಮಾಡುವ ಮೂಲಕ ಉದ್ರಿಕ್ತರನ್ನು ಚದುರಿಸಿ ಪರಿಸ್ಥಿಕಿಯನ್ನು ಹತೋಟೆಗೆ ತಂದಿದ್ದಾರೆ.
ಸುದ್ದಿ ತಿಳಿದು ಡಿವೈಎಸ್‌ಪಿ, ಸಿಪಿಐ ಹಾಗೂ ಪಿಎಸ್‌ಐ ನೇತೃತ್ವದಲ್ಲಿ ಪೊಲೀಸರು ಶನಿವಾರ ಗ್ರಾಮಕ್ಕೆ ತೆರಳಿ ಕಿಡಿಕೇಡಿ ಯುವಕರಿಗಾಗಿ ಶೋಧ ನಡೆಸಿದ್ದಾರೆ. ಇನ್ನೂ ಪತ್ತೆಯಾಗಿಲ್ಲ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಡಿದೆ. ಗ್ರಾಮದಲ್ಲಿ ಸದ್ಯ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ