ನವದೆಹಲಿ:

ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಇದೇ ವೇಳೆ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ಮೇಲೆ ತಡೆಯಾಜ್ಞೆ ಘೋಷಿಸಿದೆ. ಸ್ವಾತಂತ್ರ್ಯ ಹೋರಾಟಗಾರರಿಗೆ ನೀವು ಕೊಡುವ ಬೆಲೆ ಇದೆನಾ ಎಂದು ಕೋರ್ಟ್ ಗರಂ ಆಗಿ ಪ್ರಶ್ನಿಸಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಇಂತಹ ವರ್ತನೆ ಮುಂದಯವರೆದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.
ಸಾವರ್ಕರ್ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಲಕ್ನೋ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ನ್ಯಾಯಾಲಯ ತಡೆ ನೀಡಿದ ಸುಪ್ರೀಂ ಕೋರ್ಟ್, ಭವಿಷ್ಯದಲ್ಲಿ ಅವರು ಅಂತಹ ಯಾವುದೇ ಹೇಳಿಕೆಗಳನ್ನು ನೀಡಿದರೆ, ಅವರ ವಿರುದ್ಧ “ಸ್ವಯಂ ಪ್ರೇರಿತ ಮೊಕದ್ದಮೆ” ಹೂಡಲಾಗುವುದು ಎಂದು ಎಚ್ಚರಿಕೆ ನೀಡಿದೆ








