ರಾಹುಲ್ ಗಾಂಧಿಗೆ ರಾಕಿ ಕಟ್ಟಿ ಸಂಭ್ರಮಿಸಿದ ಮಹಿಳೆಯರು….!

ಬೆಂಗಳೂರು

     ಚಾರಿತ್ರಿಕವಾದ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಮಾವೇಶಕಕ್ಕೆ ಸಾಗರೋಪಾದಿಯಲ್ಲಿ ಹರಿದು ನಾರಿಯರು ಹರಿದು ಬಂದರು. ಕೇವಲ ಕರ್ನಾಟಕದಿಂದ ಮಾತ್ರವಲ್ಲದೆ ದಕ್ಷಿಣ ಭಾರತದ ತಮಿಳುನಾಡು, ತೆಲಂಗಾಣ, ಆಂಧ್ರ ಮತ್ತು ಕೇರಳದಿಂದಲೂ ಸಾವಿರಾರು ನಾರಿಯರು, ಗೃಹಿಣಿಯರು “ಗೃಹಲಕ್ಷ್ಮಿ” ಉದ್ಘಾಟನೆಗೆ ಸಾಕ್ಷಿಯಾಗಿದ್ದಾರೆ.

     ಶ್ರಮಿಕ ವರ್ಗದ, ದುಡಿಯುವ ವರ್ಗಗಳ ಮಹಿಳೆಯರು, ಮಹಿಳಾ ಕಾರ್ಮಿಕರು ಮಹಿಳಾ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಸ್ವಯಂಸ್ಫೂರ್ತಿಯಿಂದ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಬಂದಿರುವುದು ವಿಶೇಷವಾಗಿತ್ತು. ಕಾಲೇಜು ವಿದ್ಯಾರ್ಥಿನಿಯರು ಕೂಡ ಅಪಾರ ಸಂಖ್ಯೆಯಲ್ಲಿ ಬಂದು ತಮ್ಮ ವಿದ್ಯಾಭ್ಯಾಸಕ್ಕೆ ಬಹಳ ದೊಡ್ಡ ನೆರವಾದ ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆ ಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾರ್ಗದುದ್ದಕ್ಕೂ ಅಭಿನಂದನೆ, ಧನ್ಯವಾದ ಹೇಳುವ ಬ್ಯಾನರ್ ಗಳನ್ನು ಹಿಡಿದು ಸಮಾವೇಶಕ್ಕೆ ಬಂದಿದ್ದರು,.

    ಬೆಳಗ್ಗೆ 10 ಗಂಟೆ ವೇಳೆಗೇ ಮಹಾರಾಜ ಗ್ರೌಂಡ್ ನಲ್ಲಿ ತುಂಬಿ ತುಳುಕುತ್ತಿತ್ತು. ಮಹಿಳಾ ಜನಸ್ತೋಮವೇ ನೆರೆದಿತ್ತು, ಪಿಂಕ್ ಬಣ್ಣದ ಧಿರಿಸಿನಲ್ಲಿ ಸಮಾವೇಶದ ಮೈದಾನದಲ್ಲಿ ಸಾವಿರಾರು ಸಂಖ್ಯೆಯ ವಿದ್ಯಾರ್ಥಿನಿಯರು ಮತ್ತು ಗೃಹಿಣಿಯರು ಕಂಗೊಳಿಸಿದರದು. ಸರ್ಕಾರದ ಕಾರ್ಯಕ್ರಮ ಮತ್ತು ಯೋಜನೆಗಳ ಚರಿತ್ರೆಯಲ್ಲಿ ಏಕ ಕಾಲಕ್ಕೆ, ಪ್ರತೀ ತಿಂಗಳು ಒಂದೂವರೆ ಕೋಟಿಗೂ ಹೆಚ್ಚು ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿಸುವ ಸರ್ಕಾರಿ ಚಳವಳಿಯ ಚೈತನ್ಯ ಪಡೆದುಕೊಂಡ ಕಾರ್ಯಕ್ರಮ ಇದಾಗಿತ್ತು.

    ಇಡಿ ವೇದಿಕೆ ಪಿಂಕ್ ಬಣ್ಣದಲ್ಲಿ ಕಂಗೊಳಿಸುತ್ತಿತ್ತು. ವೇದಿಕೆಯುದ್ದಕ್ಕೂ ಮೇಲ್ಬಾಗದಲ್ಲಿ ತ್ರಿವರ್ಣ ಮತ್ತು ಪಿಂಕ್ ಕಾಂಬಿನೇಷನಲ್ಲಿ ಅಲಂಕರಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮತ್ತು ಮಹಿಳಾ ಕಾರ್ಯಕರ್ತರ ಪಡೆ ಪಿಂಕ್ ಧಿರಿಸಿನಲ್ಲಿತ್ತು. ವೇದಿಕೆಯಲ್ಲಿದ್ದ ಕುರ್ಚಿಗಳಿಗೆ ಪಿಂಕ್ ಹೊದಿಕೆ, ಐಡಿ ಕಾರ್ಡ್, ಟ್ಯಾಗ್ ಗಳು, ನೀರಿನ ಬಾಟಲ್ ಕೂಡ ಪಿಂಕ್ ಬಣ್ಣದ್ದಾಗಿದ್ದವು.

    ಮಹಿಳಾ ಕಾರ್ಯಕರ್ತೆಯರು ಪಿಂಕ್ ಬಣ್ಣದ ರಾಕಿಯನ್ನು ರಾಹುಲ್ ಗಾಂಧಿ ಅವರಿಗೆ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಿ ಸಂಭ್ರಮಿಸಿದರು. ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿ , ರಾಕಿ ಕಟ್ಟಿಸಿಕೊಂಡಿದ್ದನ್ನು ಪ್ರಸ್ತಾಪಿಸಿದರು. “ನಾನೊಬ್ಬ ಸಹೋದರನಾಗಿ ನಿಮಗೆ ಕೊಟ್ಟ ಮಾತನ್ನು ನಾನು ಉಳಿಸಿಕೊಳ್ಳುತ್ತೇನೆ. ನಮ್ಮ ಸರ್ಕಾರ ಹೇಗಿದ್ದರೂ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap