ರೆಡ್ಡಿ ಡೀಲ್ ಬಗ್ಗೆ ನನಗೇನು ಗೊತ್ತಿಲ್ಲ ಎಂದ ಪರಮಾಪ್ತ

ಬೆಂಗಳೂರು:

Related image

      ಅಕ್ರಮ ಹಣ ವರ್ಗಾವಣೆ ಮತ್ತು ಇಡಿ ಇಲಾಖೆ ಅಧಿಕಾರಿಗಳಿಗೆ ಲಂಚ ಕೊಟ್ಟು ಡೀಲ್ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ದಣಿ ಜನಾರ್ಧನ ರೆಡ್ಡಿ ಬಂಧನಕ್ಕೆ ಸಿಸಿಬಿ ಪೊಲೀಸರು ಹುಡುಕಾಟ ನಡೆಸಿರುವ ಬಗ್ಗೆ ಸ್ನೇಹಿತ, ಶಾಸಕ ಬಿ.ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.

      ನಾನು ಚುನಾವಣಾ ಪ್ರಚಾರದಿಂದ ಸುಸ್ತಾಗಿದ್ದೇನೆ. ಪ್ರಕರಣದ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ನಾನು ಬೆಳಗ್ಗೆಯಿಂದ ಚಾನೆಲ್‌ಗಳಲ್ಲಿ ನೋಡುತ್ತಿದ್ದೇನೆ. ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಕಾನೂನು ಅದರ ಕೆಲಸ ಅದು ಮಾಡುತ್ತದೆ. ಹಾಗಾಗಿ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು. 

      ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಆಂಬಿಡೆಂಟ್‌ ಮಾರ್ಕೆಟಿಂಗ್ ಲಿಮಿಟೆಡ್ ವಂಚನೆ ಪ್ರಕರಣದ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link