ಬೆಂಗಳೂರು
ಕೊನೆಗಾಲದಲ್ಲಿ ಮಕ್ಕಳು ನಿರ್ಲಕ್ಷ್ಯ ತೋರುತ್ತಿರುವುದಕ್ಕೆ ನೊಂದ ವೃದ್ಧನೋರ್ವ ರೈಲಿಗೆ ತಲೆಕೊಟ್ಟು ಅತ್ಮಹತ್ಯೆಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರದ ಸೋಮೇಶ್ವರ ರೈಲ್ವೆ ನಿಲ್ದಾಣ ಬಳಿ ನಡೆದಿದೆ.
ಗೌರಿಬಿದನೂರು ತಾಲೂಕಿನ ಕುಂಟಚಿಕ್ಕನಹಳ್ಳಿಯ ಕೃಷ್ಣಪ್ಪ(67)ಎಂದು ಆತ್ಮಹತ್ಯೆಗೆ ಶರಣಾಗಿರುವ ವೃದ್ಧರನ್ನು ಗುರುತಿಸಲಾಗಿದೆ .ದೊಡ್ಡಬಳ್ಳಾಪುರ- ಗೌರಿಬಿದನೂರು ರೈಲು ಮಾರ್ಗದ ಸೋಮೇಶ್ವರ ರೈಲ್ವೆ ನಿಲ್ದಾಣದ ಬಳಿ ರೈಲಿಗೆ ತಲೆಕೊಟ್ಟು ವೃದ್ಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹೆಂಡತಿಯನ್ನು ಕಳೆದುಕೊಂಡಿದ್ದ ಕೃಷ್ಣಪ್ಪ ಕುಂಟಚಿಕ್ಕನಹಳ್ಳಿಯಲ್ಲಿ ಒಂಟಿ ಜೀವನ ನಡೆಸುತ್ತಿದ್ದರು. ಇವರ ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ವಾಸವಾಗಿದ್ದರು. ಇನ್ನು ಕೃಷ್ಣಪ್ಪನ ಯೋಗಕ್ಷೇಮವನ್ನು ಮಕ್ಕಳು ನೋಡಿಕೊಳ್ಳದೆ ನಿರ್ಲಕ್ಷ್ಯದಿಂದ ಕಾಣುತ್ತಿದ್ದರು ಎನ್ನಲಾಗ್ತಿದೆ. ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ಕೃಷ್ಣಪ್ಪ ಅತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಸ್ಥಳಕ್ಕೆ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








