ಉತ್ತರ ಪ್ರದೇಶ :
ಲಾರಿ ಹಾಗೂ ಟೆಂಪೋ ನಡುವೆ ಡಿಕ್ಕಿಯಾದ ಪರಿಣಾಮ ಟೆಂಪೋದಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯ ಕತ್ರಾ ಬಿಲ್ಹೌರ್ ಹೆದ್ದಾರಿಯಲ್ಲಿ ನಡೆದಿದೆ.
ಲಾರಿ ಚಾಲಕ ಅತಿ ವೇಗವಾಗಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆ ಬಳಿಕ ಆತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಈ ಸಂಬಂಧ ಟ್ರಕ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ, ಲಾರಿಯನ್ನು ವಶಕ್ಕೆ ಪಡೆದಿದ್ದು, ಆತನಿಗಾಗಿ ಹುಡುಕುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ