ಲಾರಿ-ಆಟೋ ನಡುವೆ ಅಪಘಾತ : 6 ಸಾವು

ಹೊಸಪೇಟೆ: 

       ವಡ್ಡರಹಳ್ಳಿ ಬ್ರೀಡ್ಜ್ ಬಳಿ ಎರಡು ಆಟೋ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 

     ಅಪಘಾತದಲ್ಲಿ ವೇಗವಾಗಿ ಬಂದ ಲಾರಿ ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದ್ದು ಆಟೋದಲ್ಲಿದ್ದ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
     ಬಳ್ಳಾರಿಯಿಂದ ತುಂಗಭದ್ರಾ ಡ್ಯಾಮ್ ಕಡೆಗೆ ಆಟೋ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತ ಬಳಿಕ ಲಾರಿಯನ್ನು ಬಿಟ್ಟು ಲಾರಿ ಚಾಲಕ ಪರಾರಿಯಾಗಿದ್ದಾನೆ.ಸ್ಥಳಕ್ಕೆ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap