ಬೆಂಗಳೂರು:
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಆಯೋಜಿಸಿದ್ದ ಲೋಕಸಭಾ ಚುನಾವಣಾ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಇಕ್ಬಾಲ್ ಅನ್ಸಾರಿ, ಶಿವರಾಜ್ತಂಗಡಗಿ, ರಾಘವೇಂದ್ರ ಹಿಟ್ನಾಳ್ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಈ ಸಂದರ್ಭದಲ್ಲಿ ಆಗ್ರಹಿಸಿದರು. ಇವರ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/09/vsid.gif)