ಲೋಕಸಭಾ ಚುನಾವಣೆ:ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ

ಬೆಂಗಳೂರು

      ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಪುನರಾಯ್ಕೆ ಬಯಸಿ ಡಿ.ಕೆ. ಸುರೇಶ್ ರಾಮನಗರದಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತರಿದ್ದರು.

        ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ತೇಜ್ವಸಿ ಸೂರ್ಯ ನಾಮಪತ್ರ ಸಲ್ಲಿಸಿದರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಕೆ. ಹರಿಪ್ರಸಾದ್ ನಾಮಪತ್ರ ಸಲ್ಲಿಸಿದ್ದಾರೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು ನಾಮಪತ್ರ ಸಲ್ಲಿಸಿದರು.

         ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಪುನರಾಯ್ಕೆ ಬಯಸಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಉಡುಪಿಯಲ್ಲಿ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ನಡೆದ ಮೆರವಣಿಗೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮತ್ತಿತರ ನಾಯಕರು ಉಪಸ್ಥಿತರಿದ್ದರು.

      ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ ಪ್ರಸಾದ್ ಹಾಗೂ ಬಿಎಸ್‍ಪಿ ಅಭ್ಯರ್ಥಿಯಾಗಿ ಡಾ. ಶಿವಕುಮಾರ್ ನಾಮಪತ್ರ ಸಲ್ಲಿಸಿದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಬಯಸಿ ಕೊನೆಯ ದಿನವಾದ ಇಂದು 12 ನಾಮಪತ್ರ ಸಲ್ಲಿಕೆಯಾಗಿದ್ದು, ಇದುವರೆಗೆ ಒಟ್ಟು 24 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap