ಲೋಕಸಭಾ ಚುನಾವಣೆ: 10 ಕ್ಷೇತ್ರಗಳಿಗೆ ಬೇಡಿಕೆ ಇಟ್ಟ ಜೆ ಡಿ ಎಸ್…!!!!

ಬೆಂಗಳೂರು

     ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕ್ಷೇತ್ರ ಹಂಚಿಕೆ ಕಗ್ಗಂಟು ಬಿಡಿಸಲು ಮೈತ್ರಿ ಪಕ್ಷಗಳು ಹರಸಾಹಸ ಮುಂದುವರಿದೆ. 10 ಕ್ಷೇತ್ರಗಳಿಗೆ ಬೇಡಿಕೆಯಿಟ್ಟಿರುವ ಜೆಡಿಎಸ್ ವರಿಷ್ಠ ದೇವೇಗೌಡರು ತಮ್ಮ ಪಟ್ಟು ಸಡಿಲಿಸುತ್ತಿಲ್ಲ. ಕ್ಷೇತ್ರ ಹಂಚಿಕೆ ಹಗ್ಗಜಗ್ಗಾಟ ಆದಷ್ಟು ಬೇಗ ಇತ್ಯರ್ಥಗೊಳಿಸುವ ಅವಶ್ಯಕತೆಯಿದೆ. ಹೀಗಾಗಿ ಟಿಕೇಟ್ ಹಂಚಿಕೆ ಸಮಸ್ಯೆ ಇತ್ಯರ್ಥಗೊಳಿಸಲು ದೇವೇಗೌಡರ ಮನವೊಲಿಸುವ ಕಾಂಗ್ರೆಸ್ ಪ್ರಯತ್ನ ಮುಂದುವರೆದಿದೆ.

       ಸೋಮವಾರ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಜೆಡಿಎಸ್ ವರಿಷ್ಠರ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ. 28 ಕ್ಷೇತ್ರಗಳ ಪೈಕಿ ಈಗಾಗಲೇ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಂಸದರಿದ್ದು, ಇನ್ನುಳಿದ ಕ್ಷೇತ್ರಗಳಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚಿಸಲಾಗಿತ್ತು. ಕಾಂಗ್ರೆಸ್ ಸಂಸದರಿರುವ ಕ್ಷೇತ್ರಗಳನ್ನು ಜೆಡಿಎಸ್ಗೆ? ಬಿಟ್ಟುಕೊಡಲು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೇರಿದಂತೆ ಹಲವರು ಸಿದ್ಧರಿಲ್ಲ. ಕ್ಷೇತ್ರವನ್ನು ಜೆಡಿಎಸ್ಗೆ? ಬಿಟ್ಟುಕೊಟ್ಟರೆ ಮುಂದಿನ ದಿನಗಳಲ್ಲಿ ಮತ್ತೆ ಪಕ್ಷ ಬಲಪಡಿಸುವುದು ಕಷ್ಟಸಾಧ್ಯ.

       ಅಲ್ಲದೇ ಟಿಕೇಟ್ ಆಕಾಂಕ್ಷಿಗಳು ಪಕ್ಷದ ವಿರುದ್ಧ ಸಿಡಿದೇಳುವ ಸಾಧ್ಯತೆಯೂ ಇದೆ. ಹೀಗಾಗಿ ಪಕ್ಷ ಪ್ರಾಬಲ್ಯವಿರುವ ಕ್ಷೇತ್ರಗಳನ್ನು ಜೆಡಿಎಸ್ಗೆಡ ಬಿಟ್ಟುಕೊಡದಿರಲು ಕಾಂಗ್ರೆಸ್ ನಿರ್ಧರಿಸಿದೆ. 18 ಕ್ಷೇತ್ರಗಳ ಪೈಕಿ 6 ರಿಂದ 8 ಕ್ಷೇತ್ರಗಳಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚಿಂತನೆ ನಡೆಸಿದೆಯಾದರೂ ಇದಕ್ಕೆ ದೇವೇಗೌಡರು ಒಪ್ಪುತ್ತಿಲ್ಲ.

         ಕೆಲವು ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ದೇವೇಗೌಡ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರೂ ಸಹ ಯಾವುದೇ ಲಾಭವಾಗಿರಲಿಲ್ಲ. ತದನಂತರ ಜೆಡಿಎಸ್ಗೆಗ ಆಪ್ತರಾಗಿರುವ ಕಾಂಗ್ರೆಸ್ ಸಚಿವ ಡಿ.ಕೆ.ಶಿವಕುಮಾರ್ ಅವರು ದೇವೇಗೌಡರನ್ನು ಭೇಟಿಯಾಗಿ ಚುನಾವಣೆ ಸಂಬಂಧ ಚರ್ಚೆ ನಡೆಸಿದ್ದರು. ಆದರೂ ಸಮಸ್ಯೆ ತಾರ್ಕಿಕ ಅಂತ್ಯ ಕಂಡಿರಲಿಲ್ಲ. ಸ್ಥಾನ ಹಂಚಿಕೆ ಸಮಸ್ಯೆ ಬಗೆಹರಿಯುತ್ತಿಲ್ಲವಾದ್ದರಿಂದ ಇದರ ಜವಾಬ್ದಾರಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೆಗಲಿಗೇರಿದೆ.

         ಈ ಸಂಬಂಧ ಮತ್ತೊಮ್ಮೆ ದೇವೆಗೌಡರ ಜತೆ ಮಾತುಕತೆ ಮುಂದುವರಿಸುವ ಪ್ರಯತ್ನ ಕಾಂಗ್ರೆಸ್ ನಾಯಕರಿಂದ ನಡೆದಿದ್ದು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಸೋಮವಾರ ದೇವೇಗೌಡರ ಜೊತೆ ಮಾತುಕತೆ ನಡೆಸಲಿದ್ದಾರೆ. ಸೋಮವಾರ ದಿನೇಶ್ ಗುಂಡೂರಾವ್ ಜೊತೆ ದೇವೇಗೌಡರ ಜೊತೆ ಮಾತುಕತೆ ನಡೆಸಲಿದ್ದು, ನಂತರ ಪರಸ್ಪರ ಸೀಟು ಹಂಚಿಕೆ ಮಾಡಲಾಗುವುದು. ಸೀಟು ಹಂಚಿಕೆ ಬಹುತೇಕ ನಮ್ಮಗಳ ಹಂತದಲ್ಲಿಯೇ ತೀರ್ಮಾನ ಮಾಡುವ ಭರವಸೆ ಇದ್ದರೂ ಸಹ ಕೆಲವು ಸಮಸ್ಯೆಗಳಿವೆ. ಹಾಗಾಗಿ ಬಗೆಹರಿಯದ ಕ್ಷೇತ್ರಗಳ ಹಂಚಿಕೆಯನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.

          ದಾವಣಗೆರೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಕಲ ಸಿದ್ಧತೆಗಳನ್ನು ನಡೆಸಿಕೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಚುನಾವಣೆ ಹಿನ್ನೆಲೆ ಹಲವು ಸಭೆಗಳನ್ನು ನಡೆಸಿದ್ದಾರೆ. ಹಾಘೆಯೇ ಚುನಾವಣಾ ಸಮಿತಿ ಸಭೆ, ಉಸ್ತುವಾರಿ, ಪ್ರಧಾನ ಕಾರ್ಯದರ್ಶಿಗಳ ಜೊತೆ ಚರ್ಚೆಯೂ ನಡೆಸಿದ್ದು, ತಳಮಟ್ಟದಲ್ಲಿ ಪಕ್ಷ ಸಂಘಟನೆ ನಡೆಯುತ್ತಿದೆ. ಸಮ್ಮಿಶ್ರಶ ಸರ್ಕಾರ ಇರುವುದರಿಂದ ಜೆಡಿಎಸ್ ಜೊತೆ ಹೊಂದಿಕೊಂಡು ಒಟ್ಟಾಗಿ ಹೋಗಬೇಕಿದೆ ಎಂದು ಅವರು ಸ್ಪಷ್ಟಪಡಿಸಿದರು. ಒಟ್ಟಾರೆ ನಾ ಕೊಡೆ ನೀ ಬಿಡೆ ಎನ್ನುವಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಹಗ್ಗ ಜಗ್ಗಾಟ ಮುಂದುವರಿದಿದೆ. ಈ ನಿಟ್ಟಿನಲ್ಲಿ ಪರಮೇಶ್ವರ್-ದೇವೇಗೌಡರ ಜೊತೆಗಿನ ಚರ್ಚೆ ಮಹತ್ವ ಪಡೆದುಕೊಂಡಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap