ಬೆಂಗಳೂರು:
ಕಲಬುರ್ಗಿ ಸೆನ್ ಪೊಲೀಸ್ ಠಾಣೆ ಕಾನ್ಸ್ ಟೇಬಲ್ 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮುಕ್ಕಲಪ್ಪ ನೀಲಜೇರಿ ಬಂಧಿತ ಪಿಸಿ. ಸಂಜನಾ ಬೀರಪ್ಪ ಎಂಬುವವರ ಬಳಿ 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಾನ್ಸ್ ಟೇಬಲ್ ರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ದೂರುದಾರರ ಹೆಸರು ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಸಿ ಮಕ್ಕಲಪ್ಪ ನೀಲಜೇರಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ