ಬೆಂಗಳೂರು:
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಾಜ್ಯದ ರೈತರ ಜೀವಾಳವಾಗಿರುವ ಜಲಾಶಯಗಳಾಗಿರುವ ಕೆಆರ್‌ಎಸ್, ಕಬಿನಿ, ಹೇಮಾವತಿ, ತುಂಗಭದ್ರಾ ಜಲಾಶಗಳಲ್ಲಿ ಬಿರುಕು ಕಾಣಿಸಿಕೊಂಡಿರುವುದರಿಂದ ಜಲಾಶಯದ ಸುರಕ್ಷತಾ ಧೃಷ್ಠಿಯಿಂದ ಹೊರ ಹರಿವು ಹೆಚ್ಚಳ ಮಾಡಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾನ್ಯ ಜಲಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ತಿಂಗಳಿನಿಂದ ರಾಜ್ಯದಲ್ಲಿ ಆಗುತ್ತಿರುವ ಮಳೆಯಿಂದಾಗಿ ಒಳಹರಿವು ಹೆಚ್ಚಾಗಿರುವ ಕಾರಣ ಜಲಾಶಯದ ತಡೆಗೋಡೆ ಮೇಲೆ ಹೆಚ್ಚು ಒತ್ತಡ ಉಂಟಾಗಿದೆ.
ಈ ಕಾರಣದಿಂದಾಗಿ ಹೊರ ಹರಿವು ಹೆಚ್ಚಳ ಮಾಡಿ ಅಣೆಕಟ್ಟು ಬಳಿ ಅಧಿಕಾರಿಗಳ ಗಸ್ತು ಹೆಚ್ಚಿಸಲು ಸೂಚನೆ ನೀಡಲಾಗಿದೆ ಎಂದು ವಿವರಿಸಿದರು. ನೆರೆ ಪರಿಹಾರಕ್ಕೆ ಬೆಂಗಳೂರಿನಲ್ಲಿರುವ ಗಾರ್ಮೆಂಟ್ ಕಾರ್ಖಾನೆಗಳಲ್ಲಿ ಲಭ್ಯ ಇರುವ ಸೆಕೆಂಡ್ಸ್ ಬಟ್ಟೆಗಳನ್ನು ಕಳುಹಿಸಲು ಹಾಗೂ ರಾಮನಗರ ಜಿಲ್ಲಾ ಪಂಚಾಯ್ತಿ ಮತ್ತು ಜಿಲ್ಲಾಧಿಕಾರಿ ಕಚೇರಿಗೂ ನೆರೆ ಪರಿಹಾರ ಸಾಮಗ್ರಿಗಳನ್ನು ಕಳಹಿಸಿಕೊಡಲು ಉದ್ಯಮಿಗಳು ಮತ್ತು ಶಾಸಕರಿಗೆ ಮನವಿ ಮಾಡಿದ್ದೇವೆ ಎಂದು ಅವರು ಮಾಧ್ಯಮದವರಿಗೆ ವಿವರಿಸಿದರು.
ಜಲಾಶಗಳ ಇಂದಿನ ಮಟ್ಟ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page like ಮಾಡಿ
