ವಸತಿ ಶಾಲೆಗಳನ್ನು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲು ಕ್ರಮ: ಡಾ.ಎಚ್.ಸಿ. ಮಹದೇವಪ್ಪ

ಬೆಂಗಳೂರು

     ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಸೇರಿದಂತೆ ಒಟ್ಟು 742 ವಸತಿ ಶಾಲೆಗಳನ್ನು ಉನ್ನತಿಕರಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದ್ದು, ಅನುದಾನ ಲಭ್ಯತೆಗೆ ಅನುಸಾರವಾಗಿ ಹಂತ ಹಂತವಾಗಿ ಮೇಲ್ದರ್ಜೆಗೇರಿಸಲು ಕ್ರಮ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ವಿಧಾನಪರಿಷತ್ತಿಗೆ ತಿಳಿಸಿದ್ದಾರೆ.

      ಸದಸ್ಯರಾದ ಪ್ರಕಾಶ್ ಬಾಬಣ್ಣ ಹುಕ್ಕೇರಿ ಅವರ ನಿಯಮ 72ರಡಿ ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸದ ಸಚಿವರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಅಧೀನದಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಇತರೆ ವಸತಿ ಶಾಲೆಗಳಲ್ಲಿ ಪ್ರೌಢ ಶಾಲಾ ಸಿಕ್ಷಣ ವ್ಯಾಸಂಗ ಪೂರೈಸಿದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪದವಿ ಪೂರ್ವ ಶಿಕ್ಷಣ ವ್ಯಾಸಾಂಗಕ್ಕೆ ದೂರದೂರಿಗೆ ತೆರಳಬೇಕಾಗಿರುವುದರಿಂದ, ಅನೇಕ ವಿದ್ಯಾರ್ಥಿಗಳು ಅದರಲ್ಲೂ ವಿದ್ಯಾರ್ಥಿನಿಯರು ತಮ್ಮ ವ್ಯಾಸಾಂಗವನ್ನು ಮೊಟಕುಗೊಳಿಸಿ ಭವಿಷ್ಯವನ್ನು ಹಾಳು ಮಾಡುಕೊಳ್ಳುತ್ತಿರುವುದರಿಂದ ಸದರಿ ಸರ್ಕಾರಿ ವಸತಿ ಶಾಲೆಗಳನ್ನು ಪದವಿ ಪೂರ್ವ ಶಿಕ್ಷಣಕ್ಕೆ ಅವಕಾಶ ಕಲ್ಪಿಸಲು ಅನುಕೂಲವಾಗುವಂತೆ ಅನುದಾನದ ಲಭ್ಯತೆಯ ಆಧಾರದ ಮೇಲೆ ಹಂತ ಹಂತವಾಗಿ ಉನ್ನತಿಕರಿಸಲು ಕ್ರಮ ವಹಿಸುವುದಾಗಿ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap