ವಾಯುಭಾರ ಕುಸಿತ : ರಾಜ್ಯದಲ್ಲಿ ಮಳೆರಾಯನ ಅರ್ಭಟ

ಬೆಂಗಳೂರು:

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ. ಜೊತೆಗೆ ಮೇ 18ರಿಂದ ಇನ್ನಷ್ಟು ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಇಲಾಖಾ ವತಿಯಿಂದ ಆರೆಂಜ್ ಆಲರ್ಟ್ ಘೋಷಣೆಯಾಗಿದ್ದು, ‌ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನು ಮುಂದಿನ ಮೂರು ದಿನಗಳ ಕಾಲ‌ನಗರ ಪ್ರದೇಶಗಳಲ್ಲಿ ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದ್ದು, ಗುಡುಗು ಸಿಡಿಲಿನಿಂದ ಭಾರೀ ಪ್ರಮಾಣದ ಮಳೆಯಾಗುವ ಸಂಭವವಿದೆ. ನಿನ್ನೆ ಸಂಜೆ ಬೆಂಗಳೂರಿನಾದ್ಯಂತ ಮಳೆಯಾಗಿದೆ.

ಇನ್ನೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಇಂದು (ಮೇ17) ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಬಳ್ಳಾರಿ, ಮಂಡ್ಯ, ಚಿತ್ರದುರ್ಗ, ಮೈಸೂರು, ದಾವರಣಗೆರೆಯಲ್ಲಿ ಮುಂದಿನ ನಾಲ್ಕು ದಿನ, ರಾಯಚೂರು, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಯಾದಗಿರಿ, ಹಾವೇರಿ, ಗದಗ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಮುಂದಿನ 48ಗಂಟೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ