ವಾಹನಗಳ ಮೇಲಿನ ಜಾಹೀರಾತಿಗೆ ಬಿತ್ತು ಕಡಿವಾಣ!!

ಬೆಂಗಳೂರು:

     ಸಾರಿಗೆ ವಾಹನಗಳ ಮೇಲಿನ ಜಾಹೀರಾತು ಪ್ರದರ್ಶನವನ್ನು ಸಾರಿಗೆ ಇಲಾಖೆ ನಿಷೇಧಿಸಿ ಆದೇಶ ಹೊರಡಿಸಿದ್ದು, ಜಾಹೀರಾತು ಪ್ರದರ್ಶಿಸಬೇಕಿದ್ದಲ್ಲಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅನುಮತಿ ಪಡೆಯುವುದು ಕಡ್ಡಾಯವೆಂದು ತಿಳಿಸಿದೆ.

      ಕರ್ನಾಟಕ ಮೋಟಾರು ವಾಹನ ನಿಯಮಗಳ ಪ್ರಕಾರ, ರಸ್ತೆಯಲ್ಲಿ ಸಂಚರಿಸುವ ಸಾರಿಗೆ ವಾಹನಗಳ ಮೇಲೆ ಜಾಹೀರಾತು ಪ್ರದರ್ಶನ ನಿಷೇಧವಿದ್ದು, ಸರಕು ಸಾಗಣೆ ವಾಹನ, ಆಟೋರಿಕ್ಷಾ, ಟ್ಯಾಕ್ಸಿ ಸೇರಿದಂತೆ ಸಾರಿಗೆ ವಾಹನಗಳ ಮಾಲೀಕರು ತಮ್ಮ ವಾಹನಗಳ ಮೇಲಿರುವ ಜಾಹೀರಾತುಗಳನ್ನು ತಕ್ಷಣವೇ ತೆರವುಗೊಳಿಸಬೇಕೆಂದು ಸೂಚಿಸಲಾಗಿದೆ.

      ಸಾರಿಗೆ ವಾಹನಗಳ ಮೇಲೆ ಜಾಹೀರಾತು ಪ್ರದರ್ಶಿಸಿದರೆ ಇದು ಇತರ ವಾಹನಗಳ ಚಾಲಕರ ಏಕಾಗ್ರತೆಗೆ ಭಂಗ ತರಬಹುದು ಎಂಬ ಕಾರಣಕ್ಕೆ ಈ ನಿಯಮವನ್ನು ರೂಪಿಸಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸಾರಿಗೆ ಇಲಾಖೆ ಈಗ ಮುಂದಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap