ಹೊನ್ನಾಳಿ:
ದ್ವಿತೀಯ ಮಂತ್ರಾಲಯ ಎಂದೇ ಪ್ರಸಿದ್ಧಿಯಾಗಿರುವ ಇಲ್ಲಿನ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದ ಆವರಣದಲ್ಲಿ 347ನೇ ಆರಾಧನಾ ಮಹೋತ್ಸವದ ಅಂಗವಾಗಿ ಉತ್ತರಾರಾಧನೆಯ ದಿನವಾದ ಬುಧವಾರ ಗುರುಗಳ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ನಾಡಿನ ವಿವಿಧ ಮೂಲೆಗಳಿಂದ ಭಕ್ತರು ಆಗಮಿಸಿ ರಾಯರ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
ಆರಾಧನಾ ಮಹೋತ್ಸವದ ಅಂಗವಾಗಿ ಪ್ರತಿದಿನ ರಾಯರ ವೃಂದಾವನಕ್ಕೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಅಷ್ಟೋತ್ತರ, ರಜತ ರಥೋತ್ಸವ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಶೇಷ ಉಪನ್ಯಾಸ ಕಾರ್ಯಕ್ರಮಗಳು ಜರುಗಿದವು.
ಶ್ರೀ ರಾಘವೇಂದ್ರ ಸೇವಾ ಟ್ರಸ್ಟ್‍ನ ಅಧ್ಯಕ್ಷ ಟಿ. ರಾಘವೇಂದ್ರ, ಉಪಾಧ್ಯಕ್ಷ ಕೆ.ಆರ್. ಶ್ರೀನಿವಾಸ್, ಕಾರ್ಯದರ್ಶಿ ಎಚ್.ಎಂ. ಶ್ರೀನಿವಾಸ ಮೂರ್ತಿ, ಸಹ ಕಾರ್ಯದರ್ಶಿ ಎಚ್.ಎಸ್. ರಾಘವೇಂದ್ರ, ಟ್ರಸ್ಟಿ ವಾದಿರಾಜ್ ಕಮರೂರು, ಬ್ರಾಹ್ಮಣ ಸಮಾಜದ ಮುಖಂಡರಾದ ಎನ್. ಜಯರಾವ್, ಸತ್ಯನಾರಾಯಣರಾವ್, ಮನೋಹರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ