ವಿದ್ಯಾರ್ಥಿಗಳಗೆ ಸಿಹಿಸುದ್ದಿ ನೀಡಿದ ಇಲಾಖೆ….!

ಬೆಂಗಳೂರು:

     ಎಸ್​ಎಸ್​ಎಲ್​ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

    ವಿಧಾನಸೌಧದಲ್ಲಿಇಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಘೋಷಣೆ ಮಾಡಿದರು. ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು, ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.

    2023-24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯು ವಿದ್ಯಾರ್ಥಿಗಳು ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು,  ಫೇಲ್​​​ ಅಥವಾ ಕಡಿಮೆ ಅಂಕ ಬಂದವರು 3 ಬಾರಿ ಪರೀಕ್ಷೆ ಬರೆಯಬಹುದು. 32.44 ಲಕ್ಷ ಮಕ್ಕಳಿಗೆ ಕಲಿಕಾ ಬಲವರ್ಧನೆ ಕಾರ್ಯಕ್ರಮ ನಡೆಸುವುದಾಗಿ ಅವರು ತಿಳಿಸಿದರು.

    ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನಧಾರಣೆ ವೃದ್ಧಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ನಡೆಸಲಿರುವ 3 ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap