ಬೆಂಗಳೂರು:
2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದ್ದು, ಜೂನ್ 1 ರವರೆಗೆ ಹಳೆಯ ಬಸ್ ಪಾಸ್ ಬಳಸುವಂತೆ ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ. ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ.
ನಿಗಮವು ಪ್ರತಿ 2023-24ನೇ ಸಾಲಿನ ವಿದ್ಯಾರ್ಥಿ ಉಚಿತ / ರಿಯಾಯಿತಿ ಬಸ್ ಪಾಸುಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮವಹಿಸಲಾಗುತ್ತಿದ್ದು, ಇಡಿಸಿಎಸ್ ಇಲಾಖೆಯು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ವಿದ್ಯಾರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಕೆಗೆ ಹಾಗೂ ಪಾಸು ಪಡೆಯಲು ಕಾಲಾವಕಾಶ ನೀಡಬೇಕಿರುತ್ತದೆ. ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮವಹಿಸಬೇಕಿರುತ್ತದೆ.
ಈ ಸಂಬಂಧ ವಿದ್ಯಾರ್ಥಿಗಳಿಗೆ ಜೂನ್ 15ರವರೆಗೆ ಈ ಕೆಳಕಂಡ ದಾಖಲೆಗಳನ್ನು ನಿಗಮದ ಬಸ್ಸುಗಳಲ್ಲಿ ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ