ಚಳ್ಳಕೆರೆ
ಪ್ರಸ್ತುತ ವರ್ಷದ ಶೈಕ್ಷಣಿಕ ಶಾಲೆಗಳ ಆರಂಭ ಶೀಘ್ರದಲ್ಲೇ ಆಗಲಿದ್ದು, ಕಳೆದ ಸುಮಾರು 20 ತಿಂಗಳಿಂದ ರಜೆ ಸವಿಯನ್ನು ಸವಿಯುತ್ತಿರುವ ವಿದ್ಯಾರ್ಥಿಗಳಿಗೆ ಇಂಗ್ಲಿಷ್, ಕನ್ನಡ ವಾಕರಣ, ಸಮೂಹ ಸಂವಹನ ಮತ್ತು ಕೌಶಲ್ಯ ವಿಚಾರಗಳ ಬಗ್ಗೆ ಜಾಗೃತಿಯನ್ನು ಮೂಡಿಸಲು ಇಲ್ಲಿನ ಆದರ್ಶ ಆಂಗ್ಲ ಪ್ರೌಢಶಾಲೆಯಲ್ಲಿ ಬೇಸಿಗೆ ಸಂಭ್ರಮ ಕಾರ್ಯಕ್ರಮ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯ ಜಿ.ಕೆ.ಶ್ರೀನಿವಾಸ್, ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಕಲಿಕೆಯ ವ್ಯವಸ್ಥೆಯನ್ನು ಸದಾ ಜಾಗೃತಿಗೊಳಿಸಿಕೊಳ್ಳಬೇಕು. ಯಾವುದೇ ಹಂತದಲ್ಲೂ ನಿರ್ಲಕ್ಷ್ಯೆ ತೋರಿದಲ್ಲಿ ಅದು ಅವರ ಶೈಕ್ಷಣಿಕ ಪ್ರಗತಿಗೆ ಹಿನ್ನೆಡೆ ಉಂಟು ಮಾಡಲು ಸಾಧ್ಯವಿರುತ್ತದೆ. ಎಲ್ಲರ ಭವಿಷ್ಯದ ಬದುಕು ಶಿಕ್ಷಣ ಮೇಲೆಯೇ ಅವಲಂಬಿತವಾಗಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಕಲಿಕೆಯ ಬಗ್ಗೆ ಸದಾ ಜಾಗೃತರಾಗಿರಬೇಕೆಂದು ತಿಳಿಸಿದರು.
ಬೇಸಿಗೆ ಸಂಭ್ರಮ ಕಾರ್ಯಕ್ರಮದ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ಹೊಸದುರ್ಗ ಉಪನ್ಯಾಸಕ ಪ್ರವೀಣ್, ಇಂತಹ ಕಾರ್ಯಕ್ರಮಗಳು ಸಾಮಾನ್ಯವಾಗಿ ಖಾಸಗಿ ಶಾಲೆಗಳಲ್ಲಿ ಆಯೋಜಿಸುವ ಮೂಲಕ ವಿದ್ಯಾರ್ಥಿಗಳನ್ನು ತಮ್ಮ ಸಂಸ್ಥೆಗೆ ದಾಖಲಾತಿ ಮಾಡಿಕೊಳ್ಳುವ ಉದ್ದೇಶವನ್ನು ಹೊಂದಿರುತ್ತಾರೆ.
ಆದರೆ, ಸರ್ಕಾರಿ ಶಾಲೆಗಳಲ್ಲಿ ಇಂತಹ ಕಾರ್ಯಕ್ರಮಗಳಿಗೆ ಆಸಕ್ತಿ ಕಡಿಮೆ. ಆದರೆ, ಮಕ್ಕಳ ಕಲಿಕೆಯನ್ನು ಮತ್ತಷ್ಟು ಉನ್ನತ ಮಟ್ಟದಲ್ಲಿ ಗಮನಿಸುವ ದೃಷ್ಠಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕಲಿಕೆಯಲ್ಲಿ ತನ್ನದೇಯಾದ ನೈಪುಣ್ಯತೆಯನ್ನು ಹೊಂದಿರುತ್ತಾನೆ. ಆದರೆ, ಕೆಲವು ಸಂದರ್ಭಗಳಲ್ಲಿ ಅವುಗಳನ್ನು ಹೊರಗೆಡುವಲು ಅವಕಾಶವಿರುವುದಿಲ್ಲ.
ಶಿಕ್ಷಣದಲ್ಲಿ ಹೆಚ್ಚು ಕಲಿತಷ್ಟು ಅಭಿವೃದ್ಧಿ ಪಥದತ್ತ ಸಾಗಲು ಉಪಯುಕ್ತವಾಗುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಬೇಸಿಗೆ ಸಂಭ್ರಮದಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಹಲವಾರು ವಿದ್ಯಾರ್ಥಿಗಳನ್ನು ಸಂವಾದ ನಡೆಸಿದ ಅವರು, ಇಂಗ್ಲಿಷ್, ಕನ್ನಡ ವ್ಯಾಕರಣ, ಸಮೂಹ ಸಂವಹನ ಮತ್ತು ಕೌಶಲ್ಯ ವಿಚಾರಗಳ ಸಂಬಂಧಪಟ್ಟಂತೆ ಹಲವಾರು ಪ್ರಶ್ನೆಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಉತ್ತರವನ್ನು ಪಡೆದರಲ್ಲದೆ ವಿದ್ಯಾರ್ಥಿಗಳು ಸಹ ಉತ್ತಮ ಬೋಧನೆಯನ್ನು ಮಾಡಿದರು. ಸಂಪನ್ಮೂಲ ವ್ಯಕ್ತಿಯಾದ ಪೆನ್ನಯ್ಯ, ಸಿಬ್ಬಂದಿಗಳಾದ ಮಂಜುನಾಥ, ಬೊಮ್ಮಲಿಂಗಪ್ಪ, ಲಕ್ಷ್ಮಿದೇವಿ, ತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
