
ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯ ವೈರಲ್ ಆಗಿತ್ತು. ಈ ಘಟನೆ ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಶಾಲೆಯಲ್ಲಿ ನಡೆದಿತ್ತು.
ಈ ಕಾಮುಕ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತುಂಬಾ ಆಗ್ರಹಗಳು ಕೇಳಿಬಂದಿತ್ತು.
ಹಾಗಾಗಿ ಖಾಸಗಿ ಶಾಲಾ ಆಡಳಿತ ಮಂಡಳಿ ತುರ್ತು ಸಭೆಯಲ್ಲಿ ಆ ಮುಖ್ಯ ಶಿಕ್ಷಕನನ್ನು ಸೇವೆಯಿಂದಲೇ ಖಾಯಂ ವಜಾಗೊಳಿಸಲು ತೀರ್ಮಾಣಿಸಿದ್ದಾರೆ. ಮುಖ್ಯಶಿಕ್ಷಕ ಆರ್.ಎಂ.ಅನಿಲ್ ಕುಮಾರ್ ಎಂಬುವರೇ ಸೇವೆಯಿಂದಲೇ ಖಾಯಂ ವಜಾಗೊಂಡಿರುವವರು.
ಶಾಲೆಯೊಂದರ ಕೊಠಡಿಯೊಳಗೆ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ಮುದ್ದಾಡುತ್ತಿದ್ದ ದೃಶ್ಯವನ್ನು ಹೊರಗಿನಿಂದ ಕಿಟಕಿ ಬಳಿ ನಿಂತು ಕೆಲ ವಿದ್ಯಾರ್ಥಿಗಳು ವಿಡಿಯೋ ಮಾಡಿದ್ದರು. ಕಿಟಕಿ ಬಳಿ ವಿಡಿಯೋ ಮಾಡುತ್ತಿರುವುದನ್ನ ನೋಡಿದ ಕೂಡಲೇ ವಿದ್ಯಾರ್ಥಿನಿಯನ್ನ ಬಿಟ್ಟು ಮುಖ್ಯಶಿಕ್ಷಕ ಸುಮ್ಮನೆ ನಿಲ್ಲುವುದು ಮತ್ತು ವಿದ್ಯಾರ್ಥಿನಿ ಕೊಠಡಿಯಿಂದ ಹೊರ ಹೋಗುವ ದೃಶ್ಯ ವೈರಲ್ ವಿಡಿಯೋದಲ್ಲಿ ಸೆರೆಯಾಗಿತ್ತು.
ಈ ವಿಡಿಯೋವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಬಿಇಒ ಚಂದ್ರಕಾಂತ್ ಮತ್ತು ಡಿಡಿಪಿಐ ರಾಮಚಂದ್ರರಾಜೇ ಅರಸ್ ಈಗಾಗಲೇ ತಿಳಿಸಿದ್ದಾರೆ. ಈಗಾಗಲೇ ಮುಖ್ಯಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ಸಹ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
