ವಿದ್ಯಾವಾಹಿನಿ ವಿದ್ಯಾರ್ಥಿಗಳಿಂದ ಸಂತ್ರಸ್ತರ ನಿಧಿಗೆ 26 ಸಾವಿರ ರೂ. ಕೊಡುಗೆ

ತುಮಕೂರು

                ವಿದ್ಯಾವಾಹಿನಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ‘ಕೊಡಗು ನೆರೆ ಸಂತ್ರಸ್ಥರಿಗೆ ಪರಿಹಾರ ನಿಧಿ’ಗೆ ಹಣವನ್ನು ಸಂಗ್ರಹಿಸಲಾಯಿತು.

               ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜು, ವಿದ್ಯಾನಿಧಿ ಪದವಿ ಪೂರ್ವ ಕಾಲೇಜು ಹಾಗೂ ವಿದ್ಯಾವಾಹಿನಿ ಪಿ.ಜಿ.ಕಾಲೇಜುಗಳಿಂದ ಸುಮಾರು 26,780/- ರೂಪಾಯಿಗಳನ್ನು ಸಂಗ್ರಹಿಸಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಲ್ಲಿಸಲು ಪ್ರಜಾಪ್ರಗತಿ ಪತ್ರಿಕೆಯ ಸಂಪಾದಕರಾದ ನಾಗಣ್ಣರವರಿಗೆ ತಲುಪಿಸಲಾಯಿತು.

               ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡುತ್ತಾ ಅತಿಹೆಚ್ಚು ಮಳೆಯಿಂದಾಗಿ ಸಾಕಷ್ಟು ಜನರು ಅಪಾರ ತೊಂದರೆಗೆ ಸಿಲುಕಿದ್ದಾರೆ. ಅವರಿಗೆ ದಿನ ಬಳಕೆಯ ಅವಶ್ಯಕ ವಸ್ತುಗಳಾದ ಬಟ್ಟೆ, ಔಷಧಿ, ಚಪ್ಪಲಿ ಇವುಗಳ ಅವಶ್ಯಕತೆ ತುಂಬಾ ಇದೆ. ಅವುಗಳನ್ನು ಒದಗಿಸಲು ಪ್ರತಿಯೊಬ್ಬರೂ ಸಹಾಯ ಮಾಡಬೇಕಾಗುತ್ತದೆ ಎಂದು ತಿಳಿಸಿದರು. ಸಂಸ್ಥೆಯ ಅಧ್ಯಕ್ಷರಾದ ಕೆ.ಬಿ.ಜಯಣ್ಣ ರವರು ವಿದ್ಯಾರ್ಥಿಗಳನ್ನು ಕುರಿತು ಕೆಲವು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜೀವ ಹಾನಿ, ಜೊತೆಗೆ ಅಪಾರ ಆಸ್ತಿ ಪಾಸ್ತಿ ನಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬರು ನೆರವಾಗುವುದು ಮಾನವೀಯತೆ. ಅಂತಹ ಕೆಲಸವನ್ನು ವಿದ್ಯಾವಾಹಿನಿ ಸಂಸ್ಥೆ ಹಾಗೂ ವಿದ್ಯಾರ್ಥಿಗಳು ಮಾಡಿದ್ದಾರೆ. ಹಾಗಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ತಿಳಿಸಿದರು.

                ಕಾರ್ಯದರ್ಶಿಗಳಾದ ಎನ್.ಬಿ.ಪ್ರದೀಪ್ ಕುಮಾರ್ ರವರು ಮಾತನಾಡುತ್ತಾ ಎಲ್ಲಾ ವಿದ್ಯಾರ್ಥಿಗಳು ತಮಗೆ ಸಾಧ್ಯವಾದಷ್ಟು ಸಹಾಯವನ್ನು ಮಾಡುವುದರ ಮೂಲಕ ಅವರ ಕಷ್ಟಕ್ಕೆ ಸ್ಪಂದಿಸಿದ್ದೀರಿ, ಸಂಸ್ಥೆಯ ವತಿಯಿಂದಲೂ 25,000/- ರೂಪಾಯಿಗಳನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ನೀಡಲಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Recent Articles

spot_img

Related Stories

Share via
Copy link
Powered by Social Snap