ವಿದ್ಯುತ್ ಕಳವು: ಆರೋಪಿ ಬಂಧನ

 ತುಮಕೂರು:

      ತುರುವೇಕೆರೆ ತಾಲ್ಲೂಕು ಲೋಕಮ್ಮನಹಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ್ ಎಂಬುವರ ವಿರುದ್ಧ ಕಳ್ಳತನದ ಆರೋಪದ ಮೇರೆಗೆ ಪ್ರಕರಣ ದಾಖಲಿಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿತ್ತು.

      ಆರೋಪಿಯು ದಂಡದ ಹಣ 16,890ಗಳನ್ನು ಪಾವತಿಸುವಲ್ಲಿ ವಿಫಲನಾಗಿದ್ದು, ನ್ಯಾಯಾಲಯವು ಆರೋಪಿಗೆ ವಿಚಾರಣೆಗಾಗಿ ಹಲವು ಬಾರಿ ತಿಳಿಸಿದ್ದರೂ ಸಹ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ನ್ಯಾಯಾಲಯವು ಆರೋಪಿಯನ್ನು ಹಾಜರುಪಡಿಸಲು ದಸ್ತಗಿರಿ ವಾರೆಂಟ್ ಅನ್ನು ಹೊರಡಿಸಿತ್ತು. ಸದರಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಳಡಪಿಸಿದೆ.

      ಬೆಸ್ಕಾಂ ಜಾಗೃತದಳ ಪೊಲೀಸ್ ಅಧೀಕ್ಷಕ ಎಂ.ನಾರಾಯಣ ಹಾಗೂ ಪೊಲೀಸ್ ಉಪಧೀಕ್ಷಕ ವಿ.ಬಿ. ಭಾಸ್ಕರ್ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ಎಂ.ಸುರೇಶ್ ಅವರ ಮಾರ್ಗದರ್ಶನದಲ್ಲಿ ತುಮಕೂರು ಬೆಸ್ಕಾಂ ಜಾಗೃತದಳ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ಎಂ.ವಿ.ಶೇಷಾದ್ರಿ ಮತ್ತು ಪಿಎಸ್‍ಐ ಮಹಾಲಕ್ಷ್ಮಮ್ಮ ಹಾಗೂ ಸಿಬ್ಬಂದಿಗಳಾದ ಪುರುಷೋತ್ತಮ್, ಬಸವರಾಜು, ಆರೋಪಿಯನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಶ್ರಮಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link