ವಿಧಾನಸಭಾ ಚುನಾವಣೆ : ಗೌರವಧನ ಮಂಜೂರು

ಬೆಂಗಳೂರು:

     2023ರ ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿದ ಜಿಲ್ಲಾ ಚುನಾವಣಾಧಿಕಾರಿ, ಅಪರ ಜಿಲ್ಲಾ ಚುನಾವಣಾಧಿಕಾರಿ, ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿ ಮತ್ತು ಸಹಾಯ ಚುನಾವಣಾಧಿಕಾರಿ, ಚುನಾವಣಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳಿಗೆ ಗೌರವಧನವನ್ನು ಮಂಜೂರು ಮಾಡಲಾಗಿದೆ.

     ಈ ಕುರಿತಂತೆ ಸಹಾಯಕ ಮುಖ್ಯ ಚುನಾವಣಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿಯವರು ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

    ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಬರೆದಿರುವಂತ ಪತ್ರದಲ್ಲಿ 2023ರ ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿ, ಸಿಬ್ಬಂದಿಗಳಿಗೆ ಗೌರವಧನವನ್ನು ಪಾವತಿಸಲು ಆದೇಶ ಹೊರಡಿಸಲಾಗಿತ್ತು ಎಂದಿದ್ದಾರೆ.

   ದಿನಾಂಕ 01-01-2023ರಿಂದ 15-05-2023ರವರೆಗೆ ಪೂರ್ಣ ಅವಧಿಯವರೆಗೆ ಸಮರ್ಪಕವಾಗಿ ಚುನಾವಣಾ ಕಾರ್ಯ ನಿರ್ವಹಿಸಿರುವ ಅಧಿಕಾರಿ, ಸಿಬ್ಬಂದಿಗಳಿಗೆ ಅವರ ಒಂದು ತಿಂಗಳ ವೇತನ ಅಂದರೆ ಮೇ. 2023ರ ವೇತನದ ಪೂರ್ಣಮೊತ್ತವನ್ನು ಹಾಗೂ ಕಡಿಮೆ ಅವಧಿಗೆ ಹಾಜರಾಗ ಅಧಿಕಾರಿ, ಸಿಬ್ಬಂದಿಗಳಿಗೆ ಹಾಜರಾದ ದಿನಗಳಿಗನುಗುಣವಾಗಿ ಅವರ ಹಾಜರಾತಿ ಪ್ರಮಾಣಾನುಸಾರ ವೇತನ ಗೌರವವನ್ನಾಗಿ ನಿಗದಿಪಡಿಸಿ, ಮಂಜೂರು ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿತ್ತು ಎಂದಿದೆ.

    ಸರ್ಕಾರದ ಆದೇಶಗಳಲ್ಲಿ ನಿಗದಿಪಡಿಸಿರುವ ಗೌರವಧನದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಹಾಗೂ ಯಾವುದೇ ಹೆಚ್ಚುವರಿ ಭತ್ಯೆಗಳನ್ನು ಮಂಜೂರು ಮಾಡಲು ಅವಕಾಶವಿರುವುದಿಲ್ಲ. ಸದರಿ ವೇತನವನ್ನು ಪ್ರಧಾನ ಲೆಕ್ಕ ಶೀರ್ಷಿಕೆಯಲ್ಲಿ ಭರಿಸತಕ್ಕದ್ದು ಎಂದು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap