ಬೆಳಗಾವಿ:
ವಿಧಾನ ಪರಿಷತ್ ಸಭಾಪತಿಯಾಗಿ ಪ್ರತಾಪ್ ಚಂದ್ರ ಶೆಟ್ಟಿ ಬುಧವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಕೊನೆಕ್ಷಣದವರೆಗೂ ತಮ್ಮನ್ನೇ ಸಭಾಪತಿ ಸ್ಥಾನಕ್ಕೆ ಆಯ್ಕೆ ಮಾಡುವುದಾಗಿ ದೋಸ್ತಿ ಪಕ್ಷಗಳ ಮುಖಂಡರು ಹೇಳಿದ್ದರು. ಕೊನೆ ಕ್ಷಣದಲ್ಲಿ ಪ್ರತಾಪ್‍ಚಂದ್ರ ಶೆಟ್ಟಿ ಅವರನ್ನು ಕಣಕ್ಕಿಳಿಸಿದ್ದಕ್ಕೆ ಹಂಗಾಮಿ ಸಭಾಪತಿ ಬಸವರಾಜಹೊರಟ್ಟಿ ಬೇಸರ ಹೊರಹಾಕಿದ್ದಾರೆ.
ವಿಧಾನಪರಿಷತ್ ಸಭಾಪತಿಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಡೆದುಕೊಂಡಿರುವ ರೀತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








