ವಿಪಕ್ಷಗಳ ಒಗ್ಗಟ್ಟಿನಿಂದ ಏನೂ ಪ್ರಯೋಜನವಿಲ್ಲ : ಗುಲಾಂ ನಭಿ ಆಜಾದ್‌

ಶ್ರೀನಗರ: 

    2024 ರ ಲೋಕಸಭಾ ಚುನಾವಣೆಗೆ ಮುನ್ನ ‘ವಿರೋಧ ಪಕ್ಷಗಳ ಒಗ್ಗಟ್ಟಿನಿಂದ ಯಾವುದೇ ಪ್ರಯೋಜನ ವಾಗುವುದಿಲ್ಲ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಗುಲಾಂ ನಬಿ ಆಜಾದ್  ಹೇಳಿದ್ದಾರೆ.

    ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕರೆದಿರುವ ವಿರೋಧ ಪಕ್ಷಗಳ ಸಭೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಗುಲಾಂ ನಬಿ ಆಜಾದ್,  ತಮಗೆ ಆಹ್ವಾನ ಬಂದಿಲ್ಲ ಎಂದು ಸ್ಪಷ್ಟ ಪಡಿಸಿದರು. ಎರಡೂ ಪಕ್ಷಗಳಿಗೆ ಏನಾದರೂ ಲಾಭ ಇದ್ದಾಗ ಮಾತ್ರ ವಿರೋಧದ ಒಗ್ಗಟ್ಟಿನಿಂದ ಪ್ರಯೋಜನವಾಗುತ್ತದೆ. ಇಬ್ಬರಿಗೂ ಲಾಭದ ಹಂಚಿಕೆಯಲ್ಲಿ ವ್ಯತ್ಯಾಸವಿರಬಹುದು – ಅದು 50-50 ಅಥವಾ 60-40 ಆಗಿರಬಹುದು – ಆದರೆ ಈ ಸಂದರ್ಭದಲ್ಲಿ, ಎರಡೂ ಕಡೆಯವರು ಏನೂ  ಲಾಭ ಇಲ್ಲ ಎಂದಿದ್ದಾರೆ.

     ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಸಿಪಿಎಂಗೆ ಒಬ್ಬನೇ ಒಬ್ಬ ಶಾಸಕ ಇಲ್ಲ. ಹೀಗಿರುವಾಗ ಸಿಎಂ ಮಮತಾ ಬ್ಯಾನರ್ಜಿ ಅವರ ಪಕ್ಷ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಈ ಎರಡು ಪಕ್ಷಗಳೊಂದಿಗೆ ಏಕೆ ಮೈತ್ರಿ ಮಾಡಿಕೊಳ್ಳುತ್ತದೆ? ಇದರಿಂದ ಟಿಎಂಸಿಗೆ ಏನು ಸಿಗಲಿದೆ. ಅದೇ ರೀತಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಟಿಎಂಸಿ ಯಾವುದೇ ಶಾಸಕರನ್ನು ಹೊಂದಿಲ್ಲ. ಈ ರಾಜ್ಯಗಳಲ್ಲಿ ಕಾಂಗ್ರೆಸ್ ಟಿಎಂಸಿಗೆ ಏನು ನೀಡುತ್ತದೆ?

    ವಿಪಕ್ಷಗಳು ಬಿಜೆಪಿಯನ್ನು ಸೋಲಿಸಬೇಕೆಂದು ಬಯಸುತ್ತಿವೆ, ಆದರೆ ಯಾವುದೇ ವಿರೋಧ ಪಕ್ಷಗಳು ತಮ್ಮ ಸ್ವಂತ ರಾಜ್ಯವನ್ನು ಹೊರತುಪಡಿಸಿ ಬೇರೆ ಯಾವುದೇ ಸ್ಥಳದಲ್ಲಿ ಅಸ್ತಿತ್ವವನ್ನು ಹೊಂದಿಲ್ಲ ಎಂದು ಹೇಳಿದರು. ಚುನಾವಣೆಯ ನಂತರ ಮೈತ್ರಿ ಉತ್ತಮ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

 

   ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಯುಪಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರು ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.

   ಚುನಾವಣಾ ಪೂರ್ವ ಅಥವಾ ಚುನಾವಣೋತ್ತರ ಮೈತ್ರಿ ಎರಡರಲ್ಲೂ ವ್ಯತ್ಯಾಸ ಇರುವುದಿಲ್ಲ. ಚುನಾವಣಾ ಪೂರ್ವ ಮೈತ್ರಿಯಲ್ಲಿ ಹಾಗೂ ಚುನಾವಣೋತ್ತರ ಮೈತ್ರಿಯಲ್ಲಿ ಅಷ್ಟೇ ಸಂಖ್ಯೆಯ ಸ್ಥಾನಗಳನ್ನು ಪಡೆಯುತ್ತಾರೆ. ಚುನಾವಣೋತ್ತರ ಸನ್ನಿವೇಶದಲ್ಲಿ ಮೈತ್ರಿಯ ಹೆಚ್ಚಿನ ಅವಕಾಶವನ್ನು ನಾನು ನೋಡುತ್ತೇನೆ ಎಂದು ತಿಳಿಸಿದರು.

   ಒಂದು ವೇಳೆ ಚುನಾವಣಾ ಪೂರ್ವ ಮೈತ್ರಿಯಲ್ಲಿ ವಿರೋಧ ಪಕ್ಷಗಳು 300 ಸ್ಥಾನಗಳನ್ನು ಗೆಲ್ಲುತ್ತಾರೆ ಎಂದು ಗ್ರೌಂಡ್ ರಿಪೋರ್ಟ್ ಇದ್ದರೆ ಯಾವುದೇ ಮೈತ್ರಿ ಇಲ್ಲದಿದ್ದರೂ ಅವರು ಅಷ್ಟೇ ಸಂಖ್ಯೆಯ ಸ್ಥಾನಗಳನ್ನು ಪಡೆಯುತ್ತಾರೆ ಎಂದು ಆಜಾದ್ ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap