ಬೆಂಗಳೂರು : ಕರ್ನಾಟಕ ಶಾಂತಿಪ್ರಿಯ ರಾಜ್ಯ ಶಾಂತಿ ಕದಡುವಂತಹ ಕ್ರಮಗಳನ್ನು ಬಿಟ್ಟು ಸೌಹಾರ್ದತೆ ಕಾಪಾಡುವುದು ಒಳ್ಳೆಯದು ಎಂದು ಎಲ್ಲಾ ಸಂಘಟನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಶುಕ್ರವಾರ ರಾಜ್ಯಸಭೆ ಚುನಾವಣೆ ಮುಗಿದ ನಂತರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ದೇಶವ್ಯಾಪ್ತಿ ಶುಕ್ರವಾರ ನಡೆದ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಕಾಪಾಡಲು ಕ್ರಮ ವಹಿಸಲಾಗಿದೆ. ಇಂದು ಡಿಜಿಪಿ, ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಗೃಹ ಇಲಾಖೆ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ನಗರ ಪೆÇಲೀಸ್ ಆಯುಕ್ತರೊಂದಿಗೆ ಸಭೆ ನಡೆಸಲಾಗಿದ್ದು, ಕರ್ನಾಟಕದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಈ ಶಾಂತಿ ಸೌಹಾರ್ದತೆಯನ್ನು ಸಂಪೂರ್ಣವಾಗಿ ಕಾಪಾಡಿಕೊಳ್ಳಲು ಪ್ರತಿಯೊಂದು ಪೆÇಲೀಸ್ ಠಾಣೆಗೆ ಸೂಚನೆಯನ್ನು ನೀಡಬೇಕು. ಜಿಲ್ಲಾ ರಕ್ಷಣಾಧಿಕಾರಿಗಳು ಸಂಬಂಧಿಸಿದವರೊಂದಿಗೆ ಮಾತನಾಡಿ ಕೆ.ಎಸ್.ಆರ್.ಪಿ ತುಕಡಿಯನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಬೇಕು ಮತ್ತು ಹಿರಿಯ ಅಧಿಕಾರಿಗಳು ಈ ಬಗ್ಗೆ ಜವಾಬ್ದಾರಿಯನ್ನು ವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ ಸಂಪೂರ್ಣ ಶಾಂತಿ ಸುವ್ಯವಸ್ಥೆಯ ಜೊತೆಗೆ ಕಾನೂನು ಸುವ್ಯವಸ್ಥೆಯ ನೆಲಿಸಲಿದೆ ಎಂಬ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು.