ವಿಶ್ವದಲ್ಲೇ ಅತೀ ದೊಡ್ಡ ಡಿಜಿಟಲ್ ಪಾವತಿ ಹೆಗ್ಗಳಿಕೆ…..!

ನವದೆಹಲಿ: 

    65 ಕೋಟಿ ರೂ. ವಹಿವಾಟು ನಡೆಸುವ ಮೂಲಕ ವೀಸಾವನ್ನು ಹಿಂದಿಕ್ಕಿ ಯುಪಿಐ ವಿಶ್ವದಲ್ಲೇ ಅತೀ ದೊಡ್ಡ ಡಿಜಿಟಲ್ ಪಾವತಿ ವ್ಯವಸ್ಥೆಯಾಗಿ ಹೊರಹೊಮ್ಮಿದೆ.

    ಭಾರತದಲ್ಲಿ ಮೊಬೈಲ್ ಮೂಲಕ ನಡೆಯುವ ವಹಿವಾಟಿನ ಮೂಲವಾದ ಏಕೀಕೃತ ಪಾವತಿ ಇಂಟರ್ಫೇಸ್  ವಿಶ್ವದ ಅತಿದೊಡ್ಡ ಡಿಜಿಟಲ್ ಪಾವತಿ ವ್ಯವಸ್ಥೆಯಾಗಿ ಹೊರಹೊಮ್ಮಿದೆ. ಈ ಮೂಲಕ ಈವರೆಗೆ ನಂ.1 ಡಿಜಿಟಲ್ ಪಾವತಿ ವ್ಯವಸ್ಥೆಯಾಗಿದ್ದ ವೀಸಾವನ್ನು ಹಿಂದಿಕ್ಕಿದೆ

    ಈ ಕುರಿತು ನೀತಿ ಆಯೋಗದ ಮಾಜಿ ಸಿಇಒ ಅಮಿತಾಬ್ ಕಾಂತ್  ಅವರು ಎಕ್ಸ್‌ನಲ್ಲಿ  ಪೋಸ್ಟ್ ಹಂಚಿಕೊಂಡಿದ್ದು, 2025ರ ಮೇ-ಜೂನ್‌ನಲ್ಲಿ ಯುಪಿಐ ಪ್ರತಿದಿನ 65 ಕೋಟಿ ರೂ.ಯ ವಹಿವಾಟನ್ನು ನಡೆಸಿದ್ದು, ಇದೇ ಅವಧಿಯಲ್ಲಿ ವೀಸಾ 63.9 ಕೋಟಿ ರೂ ವಹಿವಾಟು ನಡೆಸಿದೆ. ವೀಸಾ 200 ದೇಶಗಳಲ್ಲಿ ಜಾರಿಯಲ್ಲಿದ್ದು, ಯುಪಿಐ ಕೇವಲ 7 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ ಕೂಡ ವೀಸಾವನ್ನು ಹಿಂದಿಕ್ಕಿರುವುದು ವಿಶೇಷ. ಕಳೆದ ತಿಂಗಳೇ ಈ ಸಾಧನೆ ಮಾಡಿದೆ ಎಂದು ತಿಳಿಸಿದ್ದಾರೆ.

    ಭಾರತದಲ್ಲಿ ಯುಪಿಐ ಮೂಲಕ ಗೂಗಲ್ ಪೇ, ಫೋನ್ ಪೇ, ಭೀಮ್ ಯುಪಿಐ, ಅಮೇಜಾನ್ ಪೇ, ವಾಟ್ಸಾಪ್ ಪೇ ಸೇರಿದಂತೆ ಹಲವು ಡಿಜಿಟಲ್ ಪಾವತಿ ಕಂಪನಿಗಳು ಸೇವೆ ಒದಗಿಸುತ್ತವೆ. ಬ್ಯಾಂಕ್ ಖಾತೆಯನ್ನು ಜನರು ಈ ಆ್ಯಪ್‌ಗಳಲ್ಲಿ ಲಿಂಕ್ ಮಾಡಬೇಕು. ಕೆಲವೇ ಕ್ಷಣಗಳಲ್ಲಿ ಒಬ್ಬರಿಂದ ಇನ್ನೊಬ್ಬರಿಗೆ ಇದರಿಂದ ಹಣ ಪಾವತಿ ಮಾಡಬಹುದು. ಜಾರಿಯಾದ 9 ವರ್ಷಗಳಲ್ಲೇ ಈ ಸಾಧನೆ ಮಾಡಿರುವುದು ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ

Recent Articles

spot_img

Related Stories

Share via
Copy link