ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚಂದ್ರಶೇಖರ್ ಮತ್ತು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕು ಮೂಲದ ಸುಧಾರಾಣಿ ಮೃತ ದುರ್ದೈವಿಗಳು. ಚಂದ್ರಶೇಖರ್ ಮತ್ತು ಸುಧಾರಾಣಿ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದರು. ಮದುವೆಯಾಗಲು ನಿರ್ಧರಿಸಿದ್ದರು.
ಜೂನ್ 10ರಂದು ರಾತ್ರಿ ಸುಮಾರು 9 ಗಂಟೆಗೆ ತರಬನಹಳ್ಳಿಯ ಚಂದ್ರಶೇಖರ್ ನಿವಾಸಕ್ಕೆ ಸುಧಾರಾಣಿ ಬಂದಿದ್ದಾರೆ. ಈ ವೇಳೆ ಇಬ್ಬರೂ ಜೊತೆಯಾಗಿ ಸ್ನಾನ ಮಾಡಲು ನಿರ್ಧರಿಸಿದ್ದಾರೆ. ಸ್ನಾನದ ಕಿಟಕಿ, ಬಾಗಿಲು ಮುಚ್ಚಿ ಗ್ಯಾಸ್ ಗೀಸರ್ ಆನ್ ಮಾಡಿಕೊಂಡಿದ್ದಾರೆ.
ಈ ವೇಳೆ ಗ್ಯಾಸ್ ಗೀಸರ್ ನಿಂದ ವಿಷ ಅನಿಲ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಹಿಂದೆ ಆರ್ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಇದೇ ಮಾದರಿಯ ಘಟನೆ ನಡೆದಿತ್ತು. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.