ತುಮಕೂರು:
ತುಮಕೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ವಿಶ್ವವಿದ್ಯಾನಿಲಯ ಕಲಾ ಕಾಲೇಜು ಪ್ರಥಮ ಸ್ಥಾನ ಗಳಿಸಿದೆ.
ತಿಪಟೂರಿನ ಕಲ್ಪತರು ಪ್ರಥಮ ದರ್ಜೆ ವಿಜ್ಞಾನ ಕಾಲೇಜು ಹಮ್ಮಿಕೊಂಡಿದ್ದ ಈ ಪಂದ್ಯಾಟದಲ್ಲಿ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಒಟ್ಟು 20 ತಂಡಗಳು ಭಾಗವಹಿಸಿದ್ದವು.
ಪಂದ್ಯವನ್ನು ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ ತಂಡದ ನಾಯಕ ಅಮಿತ್ ಕೆ. ಹಾಗೂ ನಿತೀಶ್ ಜಿ. ಹಾಗೂ ಎಲ್ಲ ಸದಸ್ಯರನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ. ರಾಮಚಂದ್ರಪ್ಪ ಹಾಗೂ ಸಹಾಯಕ ದೈಹಿಕ ಶಿಕ್ಷಣ ನಿರ್ದೇಶಕ ಆರ್. ಸುದೀಪ್ ಕುಮಾರ್ ಅಭಿನಂದಿಸಿದ್ದಾರೆ.