ವೀರಶೈವ ಲಿಂಗಾಯಿತರು ಕೊಡುಗೈ ದಾನಿಗಳು

ತುಮಕೂರು:


     ಜೀರ್ಣೋದ್ಧಾರಗೊಂಡ ತುಮಕೂರಿನ ಅರಳೇಪೇಟೆ ಬಸವೇಶ್ವರ ದೇವಾಲಯಕ್ಕೆ ಆಗಮಿಸಿದ ಸಚಿವ ಮುರುಗೇಶ ನಿರಾಣಿ ಅವರನ್ನು ದೇವಾಲಯ ಸಮಿತಿಯಿಂದ ಸನ್ಮಾನಿಸಲಾಯಿತು.

      ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅಭಿಮತ

ವೀರಶೈವ, ಲಿಂಗಾಯಿತ ಸಮಾಜ ದಾನ ಮಾಡುವ ಕೈ ಹೊರತು, ಬೇಡುವ ಸಮುದಾಯವಲ್ಲ. ಸಮಾಜ ತಮ್ಮ ಶಕ್ತಿ ಮೀರಿ ದೇಣಿಗೆ ಸಂಗ್ರಹಿಸಿ ಐದು ಗರ್ಭಗುಡಿಗಳಿರುವ ದೇವಾಲಯವನ್ನು ಜೀರ್ಣೋದ್ಧಾರ ಮಾಡಿರುವುದೇ ಇದಕ್ಕೆ ಸಾಕ್ಷಿ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟರು.

ನಗರದ ಅರಳೆಪೇಟೆಯಲ್ಲಿ ತುಮಕೂರು ನಗರ ವೀರಶೈವ ಸಮಾಜದ ವತಿಯಿಂದ ಜೀರ್ಣೋದ್ಧಾರಗೊಂಡಿರುವ ಶ್ರೀಬಸವೇಶ್ವರ ದೇವಾಲಯಕ್ಕೆ ಭೇಟಿ, ದೇವರ ದರ್ಶನ ಪಡೆದ ನಂತರ ಮಾತನಾಡಿದ ಅವರು, ಸಮಾಜದ ವತಿಯಿಂದ ಇಂತಹ ಧಾರ್ಮಿಕ ಕಾರ್ಯಗಳು ನಿರಂತರವಾಗಿ ನಡೆದುಕೊಂಡು ಬರುತ್ತಿರುವುದು ಸಂತೋಷದ ವಿಚಾರ ಎಂದರು.

ಸೋಮವಾರ ಈ ದೇವಾಲಯದ ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳಬೇಕಿತ್ತು. ಆದರೆ ಧಾರವಾಡದ ಕಾರ್ಯಕ್ರಮದಲ್ಲಿ ಇದ್ದ ಕಾರಣ ಬರಲಾಗಲಿಲ್ಲ. ಹಾಗಾಗಿ ಈಗ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದೇನೆ. ತುಮಕೂರಿನ ಎಲ್ಲಾ ವೀರಶೈವ, ಲಿಂಗಾಯಿತ ಸಮುದಾಯದ ಜನರಿಗೆ ನಾನು ಆಭಾರಿ. ಈ ಭಾಗದ ಯಾವುದೇ ಕೆಲಸ ಕಾರ್ಯಗಳಿದ್ದರೂ ನನ್ನ ಕೈಲಾದ ಸಹಾಯ ಮಾಡಲು ಸಿದ್ದ ಎಂದು ಮುರುಗೇಶ್ ನಿರಾಣಿ ತಿಳಿಸಿದರು.

ನೆರೆಯ ರಾಜ್ಯದ ಬೆಳವಣಿಗೆಗಳ ಮೇಲೆನಿಗಾ

ರಾಜ್ಯದಲ್ಲಿ ಮೂರನೇ ಅಲೆಯ ಭೀತಿ ಇದೆ. ಆದರೆ ಈಗಾಗಲೇ ಮುಖ್ಯಮಂತ್ರಿಗಳು ಲಾಕ್‍ಡೌನ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ದೇಶದಲ್ಲಿ 100 ಕೋಟಿಗೂ ಹೆಚ್ಚು ಕೋರೋನ ವಿರುದ್ದದ ಲಸಿಕೆ ನೀಡಲಾಗಿದೆ. ಉಳಿದ ಜನರಿಗೂ ತ್ವರಿತಗತಿಯಲ್ಲಿ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

ಪ್ರಮುಖವಾಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರಿಗೆ ಆರ್.ಎನ್.ಡಿ. ಮಾಡುವ ಮೂಲಕ ಲಸಿಕೆ ಪಡೆದುಕೊಳ್ಳುವಂತೆ ಕ್ರಮ ವಹಿಸಲಾಗುವುದು. ಅಕ್ಕಪಕ್ಕದ ರಾಜ್ಯಗಳಲ್ಲಿ ಏನೇನು ಕ್ರಮಗಳಾಗುತ್ತಿವೆ, ಬೆಳವಣಿಗೆಗಳೇನು ಎಂದು ಅಧ್ಯಯನ ನಡೆಸಿ, ರಾಜ್ಯದಲ್ಲಿಯೂ ಅಗತ್ಯ ಕ್ರಮಗಳನ್ನು ಮುಖ್ಯಮಂತ್ರಿ ಕೈಗೊಳ್ಳಲಿದ್ದಾರೆ ಎಂದು ಕೈಗಾರಿಕಾ ಸಚಿವರು ನುಡಿದರು.

ಈ ವೇಳೆ ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಶೇಖರ್, ಉಪಾಧ್ಯಕ್ಷ ಚಂದ್ರಮೌಳಿ, ಮಾಜಿ ಸಚಿವ ಶಿವಣ್ಣ, ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೋರಿ ಮಂಜಣ್ಣ, ಪದಾಧಿಕಾರಿಗಳಾದ ಅತ್ತಿ ರೇಣುಕಾನಂದ, ವೀರಶೈವ, ಲಿಂಗಾಯಿತ ಮಹಾಸಭಾದ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್ ಪಟೇಲ್, ವೀರಶೈವ ಬ್ಯಾಂಕಿನ ಅಧ್ಯಕ್ಷ ರುದ್ರಪ್ಪ, ಉಪಾಧ್ಯಕ್ಷ ಮಲ್ಲಿಕಾರ್ಜುನಯ್ಯ ಹಾಗೂ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.

ಸಿಎಂ ಆಗಲು ಆತುರ ಇಲ, ಮುಂದೆ ಅವಕಾಶವಿದೆ: 

ಮುಖ್ಯಮಂತ್ರಿ, ಮಂತ್ರಿ, ಶಾಸಕ ಯಾವ ಹುದ್ದೆಗೂ ನಾನು ಆಸೆ ಪಟ್ಟವನಲ್ಲ. ಅವುಗಳೇ ನಮನ್ನು ಹುಡುಕಿಕೊಂಡು ಬಂದಿವೆ. ಈಶ್ವರಪ್ಪ ನಮ್ಮ ಮೇಲಿನ ಅಭಿಮಾನದಿಂದ ಮುರುಗೇಶ್ ನಿರಾಣಿ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದಿದ್ದಾರೆ. ಅಲ್ಲದೆ ಅವರೆ ಸ್ಪಷ್ಟಪಡಿಸಿದ್ದಾರೆ ಸಿ.ಎಂ.ಬಸವರಾಜ ಬೊಮ್ಮಾಯಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನ್ನ ನಡುವೆ 30 ವರ್ಷದ ಸ್ನೇಹವಿದೆ. ಅಲ್ಲದೆ ನಾನು ಅವರು ಒಂದೇ ಕಾಲೇಜಿನಲ್ಲಿ ಓದಿದವರು, ನಾವು 2023ರ ವಿಧಾನಸಭಾ ಚುನಾವಣೆಯಲ್ಲಿ 125ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಪಕ್ಷವನ್ನು ಅಧಿಕಾರಕ್ಕೆ ತರುವುದರ ಕಡೆಗೆ ಗಮನಹರಿಸಿದ್ದೇವೆ. 2024ರ ಚುನಾವಣೆಯಲ್ಲಿಯೂ 28 ಸ್ಥಾನಗಳನ್ನು ಗೆಲ್ಲುವ ವಿಶ್ವಾವಿದೆ. 2023, 2028 ಅಥವಾ ಮುಂದಿನ ದಿನಗಳಲ್ಲಿ ಸಿ.ಎಂ.ಆಗುವ ಅವಕಾಶ ಸಿಗಬಹುದು. ಆತುರ ಇಲ್ಲ ಎಂದು ಮುರುಗೇಶ್ ನಿರಾಣಿ ಸ್ಪಷ್ಟ ಪಡಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap