ಇಸ್ಲಾಮಾಬಾದ್ಜ
ಜಮ್ಮು ಮತ್ತು ಕಾಶ್ಮೀರದ ಸಮಸ್ಯೆ ಪರಿಹಾರಕ್ಕಾಗಿ ಯುದ್ಧವೊಂದೇ ಪರಿಹಾರವಲ್ಲ ಎಂದು ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವ ಶಾ ಮೊಹಮ್ಮದ್ ಖುರೇಷಿ ತಿಳಿಸಿದ್ದಾರೆ.
ಆದರೆ ಈವರೆಗೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಆಡಿದ್ದ ಮಾತುಗಳಿಗೂ ಈಗ ಸಚಿವ ಹೇಳಿದ ಮಾತುಗಳಿಗೂ ಎಲ್ಲಿಯೂ ಸಾಮ್ಯತೆ ಕಾಣುತ್ತಿಲ್ಲ. ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಜಾಗತಿಕ ಸಮುದಾಯ ಸ್ಪಷ್ಟ ನಿಲುವು ಪ್ರಕಟಿಸದಿದ್ದರೆ ಪರಮಾಣು ಯುದ್ಧ ಮಾಡಲಾಗುವುದು.
ಭಾರತ-ಪಾಕಿಸ್ತಾನ ನಡುವೆ ಯುದ್ಧ ನಡೆಯುವ ಸಾಧ್ಯತೆಯೂ ಇದೆ ಎಂದು ಇಮ್ರಾನ್ ಖಾನ್ ಬೆದರಿಕೆ ಹಾಕಿದ್ದರು ಎಂದು ಪತ್ರಿಕೆಯೊಂದು ಪ್ರಕಟಿಸಿತ್ತು. ಆದರೆ ಈಗ ಖುರೇಷಿ ಅವರು, ಕಾಶ್ಮೀರ ಸಮಸ್ಯೆ ಬಗೆಹರಿಸಲು ಯುದ್ಧವೊಂದೇ ಆಯ್ಕೆಯಲ್ಲ ಎಂದು ಹೇಳುವ ಮೂಲಕ ಯೂ ಟರ್ನ್ ಹೊಡೆದಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಮೊಹಮ್ಮದ್ ಖುರೇಷಿ ಅವರು, ದಕ್ಷಿಣ ಏಷ್ಯಾದ ಮೇಲೆ ಪರಮಾಣು ನೆರಳು ಸುಳಿದಾಡುತ್ತಿದೆ. ಭಾರತ ಹಾಗೂ ಪಾಕಿಸ್ತಾನವು ಕಾಶ್ಮೀರ ಕುರಿತು ಮಾತುಕತೆ ಪ್ರಾರಂಭಿಸಲು ಶೂನ್ಯ ಮೊತ್ತದ ಮನಸ್ಥಿತಿಯಿಂದ ಹೊರಬರಬೇಕು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








