ವೈಮನಸ್ಸುಗಳನ್ನು ಬದಿಗಿಟ್ಟು ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ

ಹಿರಿಯೂರು :

      ನಮ್ಮಲ್ಲಿರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಬದಿಗಿಟ್ಟು, ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ಶಪಥ ಮಾಡಿ ಬಿಜೆಪಿ ಅಭ್ಯರ್ಥಿಯನ್ನು ಅತ್ಯಂತ ಅಧಿಕ ಮತಗಳ ಅಂತರದಿಂದ ಗೆಲ್ಲುವಂತೆ ಮಾಡೋಣ ಎಂದು ಪಕ್ಷದ ಹಿಂದುಳಿದ ವಿಭಾಗದ ರಾಜ್ಯ ಉಪಾಧ್ಯಕ್ಷ ಡಿ.ಟಿ.ಶ್ರೀನಿವಾಸ್ ಕಾರ್ಯಕರ್ತರಿಗೆ ಮನವಿ ಮಾಡಿದರು.

       ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಚಿತ್ರದುರ್ಗ ಕ್ಷೇತ್ರದಿಂದ ಭೋವಿ ಸಮುದಾಯಕ್ಕೆ ಟಿಕೆಟ್ ನೀಡಿಲ್ಲ ಎಂಬ ಅಸಮಾಧಾನವಿದೆ. 2009 ಮತ್ತು 2014ರ ಚುನಾವಣೆಗಳಲ್ಲಿ ಭೋವಿ ಸಮುದಾಯಕ್ಕೆ ಟಿಕೆಟ್ ನೀಡಲಾಗಿತ್ತು. ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳ ಪ್ರತಿನಿಧಿ ಈ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

        ಆದರೆ ಕ್ಷೇತ್ರದಲ್ಲಿ ಬಹುಸಂಖ್ಯಾತರಾಗಿರುವ ಎಡಗೈ ಸಮುದಾಯಕ್ಕೆ ಅವಕಾಶ ಮಾಡಿಕೊಟ್ಟು ಸಾಮಾಜಿಕ ನ್ಯಾಯ ಕಲ್ಪಿಸುವ ಹಿನ್ನೆಲೆಯಲ್ಲಿ ವರಿಷ್ಠರು ನಾರಾಯಣಸ್ವಾಮಿಗೆ ಟಿಕೆಟ್ ನೀಡಿರಬಹುದು. ಭವಿಷ್ಯದಲ್ಲಿ ಭೋವಿ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ವರಿಷ್ಠರ ಮೇಲೆ ಒತ್ತಡ ತರೋಣ. ಕೇಂದ್ರದಲ್ಲಿ ಎನ್‍ಡಿಎ ಅಧಿಕಾರಕ್ಕೆ ಬರಲು ಕೈ ಜೋಡಿಸೋಣ ಎಂದು ಅವರು ಮನವಿ ಮಾಡಿದರು.

       ಕ್ಷೇತ್ರದಲ್ಲಿ ಐವರು ಶಾಸಕರು ನಮ್ಮ ಪಕ್ಷದವರು ಇರುವುದು ನಮಗೆ ಪ್ಲಸ್ ಪಾಯಿಂಟ್. ಅಲ್ಲದೆ ದೇಶದಲ್ಲಿ ಮೋದಿಯವರ ಅಲೆ ಹಿಂದಿಗಿಂತ ಈ ಬಾರಿ ಹೆಚ್ಚಿದೆ. ಒಟ್ಟಾರೆ ತಳಮಟ್ಟದ ಕಾರ್ಯಕರ್ತರು ಕಣದಲ್ಲಿ ನಾವೇ ಇದ್ದೇವೆ ಎಂಬ ಭಾವನೆಯೊಂದಿಗೆ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶ್ರೀನಿವಾಸ್ ಮನವಿ ಮಾಡಿದರು.

       ಪಕ್ಷದ ತಾಲ್ಲೂಕು ಅಧ್ಯಕ್ಷ ದ್ಯಾಮಣ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯೆ ರಾಜೇಶ್ವರಿ, ತಾಲ್ಲೂಕು ಪಂಚಾಯಿತಿ ಸದಸ್ಯ ಯಶವಂತರಾಜು, ಸಿದ್ದೇಶ್‍ಯಾದವ್, ಎಂ.ಎಸ್.ರಾಘವೇಂದ್ರ, ಚಿರಂಜೀವಿ, ವನಿತಾ, ,ಮಂಜುಳಾ, ನಟರಾಜ್ ,ಅಸ್ಗರ್ ಅಹಮದ್, ಡಿ.ಶಿವಣ್ಣ ಇತರರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link