ಬೆಂಗಳೂರು:
ಕೊಡಗಿನಲ್ಲಿ ನಿರಂತರ ಮಳೆ ಹಾಗೂ ಭೂಕುಸಿತದಿಂತದಿಂದ ಉಂಟಾಗಿರುವ ಅತಿವೃಷ್ಟಿ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ವೈಮಾನಿಕ ಸಮೀಕ್ಷೆ ಮೂಲಕ ಅವಲೋಕಿಸಿದರು.
ಬೆಳಿಗ್ಗೆ ಬೆಂಗಳೂರಿನಲ್ಲಿ ಕೊಡಗಿನ ಪರಿಸ್ಥಿತಿಯ ಕುರಿತಂತೆ ಅಧಿಕಾರಿಗಳ ಸಭೆ ನಡೆಸಿ, ಮಾಹಿತಿ ಪಡೆದ ಸಿಎಂ, ಬಳಿಕ ಕೊಡಗಿಗೆ ತೆರಳಿ ಅತಿವೃಷ್ಟಿ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.
ಅತಿವೃಷ್ಟಿ ಪೀಡಿತ ಕೊಡಗು ಜಿಲ್ಲೆಯಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ಹೆಚ್ಚುವರಿ ಸೇನಾ ಸಿಬ್ಬಂದಿ ಯನ್ನು ನಿಯೋಜಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿದ ಮನವಿಗೆ ಸ್ಪಂದಿಸಿದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ.
ಇದೇ ಸಂದರ್ಭದಲ್ಲಿ ಅಲ್ಲದೆ ಜಿಲ್ಲೆಯ ಪರಿಸ್ಥಿತಿ ಯನ್ನು ಅವಲೋಕಿಸಲು ವೈಮಾನಿಕ ಸಮೀಕ್ಷೆ ನಡೆಸಲು ವಾಯುಪಡೆಯ ಹೆಲಿಕಾಪ್ಟರ್ ಒಡಗಿಸುವಂತೆಯೂ ಮನವಿ ಮಾಡಿದ್ದರು, ಅದರಂತೆ ವೈಮಾನಿಕ ಸಮೀಕ್ಷೆಗೆ ಸೇನಾ ವಿಮಾನವನ್ನು ಕುಮಾರಸ್ವಾಮಿ ಅವರಿಗೆ ನೀಡಲಾಗಿದೆ. ಮುಖ್ಯಮಂತ್ರಿಗಳ ಜತೆ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಜತೆಗಿದ್ದಾರೆ