ವ್ಯಾಪಕ ಮಳೆ: ಬೆಂಗಳೂರಿನಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು,

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಇಂದು  ಬೆಳಗ್ಗೆಯಿಂದ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆ-ಚರಂಡಿಗಳು ತುಂಬಿ ಹರಿಯುತ್ತಿವೆ. ಅಲ್ಲದೇ ವಿವಿಧ ಏರಿಯಾಗಳಲ್ಲಿ ಮರಗಳು ಸಹ ಮುರಿದುಬಿದ್ದು,  ಮಳೆ ನಗರದ ಹಲವೆಡೆ ಭಾರೀ ಅನಾಹುತ ಸೃಷ್ಟಿಸಿದೆ. ಆದರೂ ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ನಾಳೆ  ಬೆಂಗಳೂರಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

   ರಾಜಧಾನಿಯಲ್ಲಿ ವ್ಯಾಪಕ ಮಳೆ ಹಿನ್ನಲೆಯಲ್ಲಿ ಅಕ್ಟೋಬರ್ 16ರಂದು ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದ್ದಾರೆ.ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅಕ್ಟೋಬರ್ 20 ರವರೆಗೆ ದಸರಾ ರಜೆ ಇದೆ. ಆದ್ರೆ ಖಾಸಗಿ ಶಾಲೆಗಳು ಶಾಲೆ ಆರಂಭ ಮಾಡಿವೆ.

   ಸೋಮುವಾರದಿಂದಲೆ ಖಾಸಗಿ ಶಾಲೆಗಳು ಪುನರಾರಂಭವಾಗಿವೆ. ಹೀಗಾಗಿ ಮಕ್ಕಳಿಗೆ ಶಾಲೆಗೆ ಬರಲು ಕಷ್ಟ ಎದುರಾಗಿದೆ. ಇದರಿಂದ ರಾಜಧಾನಿಯ ಶಾಲೆಗಳಿಗೆ ರಜೆ ನೀಡಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಸಂಜೆ 5 ಗಂಟೆ ಬಳಿಕ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆಗಳಿವೆ.

Recent Articles

spot_img

Related Stories

Share via
Copy link