ವ್ಹೀಲಿಂಗ್ ವಿರುದ್ಧ ಕಾರ್ಯಾಚರಣೆ ಆರಂಭ

ಬೆಂಗಳೂರು:

                      ಆಪಾಯಕಾರಿ ವ್ಹೀಲಿಂಗ್ ಮಾಡುವ ಯುವಕ ವಿರುದ್ದದ ಕಾರ್ಯಾಚರಣೆ ತೀವ್ರ ಗೊಳಿಸಿರುವ ನಗರ ಸಂಚಾರ ಪೊಲೀಸರು ವ್ಹೀಲಿಂಗ್ ಮಾಡುತ್ತಿದ್ದ 6 ಮಂದಿ ಯುವಕರನ್ನು ಬಂಧಿಸಿದ್ದಾರೆ.

                       ಬಂಧಿತ ಯುವಕರಿಂದ ವ್ಹೀಲಿಂಗ್ ಮಾಡಿದ ಬೈಕ್ ಗಳನ್ನು ವಶಪಡಿಸಿಕೊಂಡು ಅವರ ಪೋಷಕರಿಗೆ ನೋಟೀಸ್ ಜಾರಿಗೊಳಿಸಲಾಗಿದೆ. ಆರೋಪಿಗಳು ನೈಸ್ ರಸ್ತೆ ಹಾಗೂ ಮೈಸೂರು ರಸ್ತೆಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದಾಗ ಬ್ಯಾಟರಾಯನಪುರ ಸಂಚಾರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

                      ವ್ಹೀಲಿಂಗ್ ಮಾಡುವ ಯುವಕರನ್ನು ಬಂಧಿಸಿ ಜಾಗೃತಿ ಮೂಡಿಸುತ್ತಿದ್ದರೂ ಯುವಕರ ವ್ಹೀಲಿಂಗ್ ಕ್ರೇಜ್ ಕಡಿಮೆಯಾಗಿಲ್ಲ ನೈಸ್‍ರಸ್ತೆ ಸೇರಿ ಇನ್ನಿತರ ರಸ್ತೆಗಳಲ್ಲಿ ಯುವಕರು ವ್ಹೀಲಿಂಗ್ ಮಾಡುತ್ತಿದ್ದು ಇದರ ಮೇಲೆ ಸಂಚಾರ ಪೊಲೀಸರು ನಿಗಾವಹಿಸಿದ್ದಾರೆ.
ಇತ್ತೀಚೆಗೆ ಏರ್ ಪೋರ್ಟ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ವಿಡಿಯೋ ಮಾಡಿ ಬಳಿಕ ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದರು

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link