ಬೆಂಗಳೂರು
ಕೆಲ ದಿನಗಳ ಹಿಂದಷ್ಟೇ ನಗರಕ್ಕೆ ಬಂದಿದ್ದ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದೆಹಲಿ ಮೂಲದ ಯುವತಿಯನ್ನು ಮಲಗಿದ್ದ ಮಗ್ಗುಲಲ್ಲೇ ಕತ್ತು ಹಿಸುಕಿ ಶಂಕಾಸ್ಪದವಾಗಿ ಕೊಲೆ ಮಾಡಿರುವ ದುರ್ಘಟನೆ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಇಮ್ಮಡಿಹಳ್ಳಿಯ ಕೈ ತೋಟದ ಬಳಿ ಬಾಡಿಗೆ ಮನೆಮಾಡಿಕೊಂಡು ಒಂಟಿಯಾಗಿ ವಾಸಿಸುತ್ತಿದ್ದ ಸಾಫ್ಟ್ವೇರ್ ಇಂಜಿನಿಯರ್ ವಿಜಯಲಕ್ಷ್ಮಿ(23) ಎಂದು ಕೊಲೆಯಾದ ಯುವತಿಯನ್ನು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆಯೇ ವಿಜಯಲಕ್ಷ್ಮಿ ಕತ್ತು ಹಿಸುಕಿ ಕೊಲೆ ಮಾಡಲಾಗಿದ್ದು ಕೃತ್ಯವು ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ.
ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದೆಹಲಿ ಮೂಲದ ವಿಜಯಲಕ್ಷ್ಮಿ ಒಂದು ತಿಂಗಳ ಹಿಂದಷ್ಟೇ ನಗರಕ್ಕೆ ಬಂದಿದ್ದು ಬಾಡಿಗೆ ಮನೆಮಾಡಿಕೊಂಡು ಒಂಟಿಯಾಗಿ ವಾಸಿಸುತ್ತಿದ್ದರು. ಅವರ ಮನೆಯ ಸ್ವಲ್ಪ ದೂರದಲ್ಲಿ ಯಾವುದೇ ಮನೆಗಳಿರಲಿಲ್ಲ.
ಯುವತಿ ಪ್ರಿಯಕರನೇ ಕೊಲೆ ಕೃತ್ಯ ನಡೆಸಿರಬಹುದು ಎಂಬ ಅನುಮಾನದಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ ಎಂದು ಡಿಸಿಪಿ ಅಬ್ದುಲ್ ಅಹದ್ ತಿಳಿಸಿದ್ದಾರೆ.