ಚಳ್ಳಕೆರೆ
ಕಳೆದ ಐದು ವರ್ಷಗಳ ಅವಧಿಯಲ್ಲಿ ಕೇಂದ್ರ ಎನ್ಡಿಎ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರಮೋದಿ ದೇಶದ ಐಕ್ಯತೆಗಾಗಿ ಶ್ರಮಿಸಿದವರು. ಅವರ ಹಲವಾರು ಯೋಜನೆಗಳು ದೇಶದ ಪ್ರಗತಿಗೆ ನಾಂದಿಯಾಗಿವೆ. ಎಲ್ಲಾ ರಂಗದಲ್ಲೂ ಪ್ರಗತಿಯನ್ನು ಸಾಧಿಸಿದ ಕೀರ್ತಿ ನರೇಂದ್ರಮೋದಿಯವರಿಗೆ ಸಲ್ಲುತ್ತದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ.ಎಸ್.ಶಿವಪುತ್ರಪ್ಪ ತಿಳಿಸಿದರು.
ಅವರು, ಭಾನುವಾರ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ಪರ ಮತಯಾಚನೆ ಮಾಡಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯದ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನರೇಂದ್ರಮೋದಿಯವರ ಆಡಳಿತದ ಬಗ್ಗೆ ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿಯನ್ನು ತಮ್ಮ ಪ್ರಚಾರದ ಮೂಲಕ ಮಾಡುತ್ತಿದ್ದು,
ಇದು ಸತ್ಯಕ್ಕೆ ದೂರವಾದ ಸಂಗತಿ. ದೇಶದ ಮತದಾರರಿಗೆ ಈಗಾಗಲೇ ನರೇಂದ್ರಮೋದಿಯವರ ನಿರಂತರ ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿ ಪರ ಚಿಂತನೆಗಳ ಬಗ್ಗೆ ಸ್ಪಷ್ಟ ಮಾಹಿತಿ ಇದೆ. ಪ್ರತಿನಿತ್ಯ ಮೋದಿಯವರ ಸಾಧನೆಯನ್ನು ತಿಳಿದುಕೊಳ್ಳುವಲ್ಲಿ ಸಾರ್ವಜನಿಕರ ಹೆಚ್ಚು ಆಸಕ್ತಿರಾಗಿದ್ದಾರೆ. ವಿರೋಧ ಪಕ್ಷದ ನಾಯಕರು ಮಾಡುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲವೆಂಬುವುದು ಜನತೆಗೆ ಮತದಟ್ಟಾಗಿದೆ. ಬಿಜೆಪಿಯ ಮತ್ತೊಮ್ಮೆ ಮೋದಿ ಅಭಿಯಾನ ಮೋದಿಯವರು ಪ್ರಧಾನಯಾಗುವ ಹಾದಿಯನ್ನು ಸುಗಮಗೊಳಿಸಿದೆ ಎಂದರು.
ಪ್ರಚಾರ ಕಾರ್ಯದಲ್ಲಿ ಬಿಜೆಪಿ ಮುಖಂಡ ಎಂ.ಎಸ್.ಜಯರಾಮ್, ಮಂಡಲಾಧ್ಯಕ್ಷ ಬಿ.ವಿ.ಸಿರಿಯಣ್ಣ, ಮಹಿಳಾ ಘಟಕದ ಅಧ್ಯಕ್ಷೆ ಜಗದಾಂಭ, ಟಿ.ಬೋರನಾಯಕ, ಡಿ.ಎಂ.ತಿಪ್ಪೇಸ್ವಾಮಿ, ಎ.ವಿಜಯೇಂದ್ರ, ಸಿ.ಎಸ್.ಪ್ರಸಾದ್, ಟಿ.ಮಂಜುನಾಥ, ಯತೀಶ್, ಚಿತ್ರಯ್ಯನಹಟ್ಟಿ ನಾಗರಾಜ, ಹೊಟ್ಟೆಪ್ಪನಹಳ್ಳಿ ಮಂಜುನಾಥ, ಕರೀಕೆರೆ ತಿಪ್ಪೇಸ್ವಾಮಿ, ರಘು, ಸಂತೋಷ್ ಮುಂತಾದವರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
