ತುಮಕೂರು
ಬ್ಯೂಟಿ ಪಾರ್ಲರ್ ಅಂಗಡಿಯೊಂದರಲ್ಲಿ ವಿದ್ಯುತ್ ಶಾರ್ಟ್‍ಸರ್ಕ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಅಂಗಡಿಯಲ್ಲಿದ್ದ ವಸ್ತುಗಳೆಲ್ಲಾ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಸುಮಾರು 5 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿರುವ ಘಟನೆ ನಗರದಲ್ಲಿಂದು ನಡೆದಿದೆ.
ನಗರದ ಬಿ.ಹೆಚ್. ರಸ್ತೆಯಲ್ಲಿರುವ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿರುವ ಕೃಷ್ಣಮೂರ್ತಿ ಎಂಬುವರ ಬಿಲ್ಡಿಂಗ್‍ನ ನ್ಯಾಚುರಲ್ ಬ್ಯೂಟಿ ಪಾರ್ಲರ್‍ನಲ್ಲಿ ವಿದ್ಯುತ್ ಶಾರ್ಟ್‍ಸರ್ಕ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡಿದೆ.
ರಾತ್ರಿ ಕೆಲಸ ಮುಗಿಸಿಕೊಂಡು ಬ್ಯೂಟಿಪಾರ್ಲರ್ ಬಾಗಿಲು ಹಾಕಿಕೊಂಡು ಹೋದ ನಂತರ ಮಧ್ಯರಾತ್ರಿಂದೀಚೆಗೆ ಶಾರ್ಟ್‍ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದ್ದು, ಅಂಗಡಿಯಲ್ಲಿದ್ದ ವಸ್ತುಗಳೆಲ್ಲಾ ಬೆಂಕಿಗೆ ಆಹುತಿಯಾಗಿವೆ.
ಇಂದು ಬೆಳಿಗ್ಗೆ ಎಂದಿನಂತೆ ಅಂಗಡಿಯ ಬೀಗ ತೆಗೆಯಲೆಂದು ಸಂತೋಷ್ ಎಂಬುವರು ಬಂದು ನೋಡಿದಾಗ ಅಂಗಡಿಯೊಳಗೆ ಹೊಗೆಯಿಂದ ಆವರಿಸಿದ್ದು, ಬೆಂಕಿ ದಗದಗನೆ ಉರಿಯುತ್ತಿದೆ. ಇದನ್ನು ಕಂಡ ಸಂತೋಷ್ ಗಾಬರಿಯಾಗಿ ಹೊರಗೆ ಓಡಿ ಬಂದಿದ್ದಾರೆ.
ನಂತರ ಅಗ್ನಿಶಾಮಕ ದಳ ಹಾಗೂ ಪೆÇಲೀಸರಿಗೆ ದೂರವಾಣಿ ಕರೆ ಮಾಡಿ ಸುದ್ದಿ ಮುಟ್ಟಿಸಿದ್ದಾರೆ.
ಘಟನೆಯ ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಶ್ರಮಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಪಾಲಿಕೆ ಸದಸ್ಯೆ ಮಂಜುಳ ಆದರ್ಶ ಭೇಟಿ ನೀಡಿ ಅಂಗಡಿ ಮಾಲೀಕರಿಗೆ ಸಾಂತ್ವನ ಹೇಳಿದರು.
ಈ ಸಂಬಂಧ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.