ಶಾಲಾ-ಕಾಲೇಜುಗಳಿಗೆ ಒಂದು ದಿನದ ವಿಶೇಷ ರಜೆ

ಜೂ13ರಂದು ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗಳು

ಪ್ರಜಾಪ್ರಗತಿ.ಕಾಂ

ಬೆಂಗಳೂರು : ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗಳು ಜೂನ್ 13ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ವಾಯವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 13ರಂದು ಮತದಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

ಯಾವ ಜಿಲ್ಲೆಗಳಲ್ಲಿ ಚುನಾವಣೆ : ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಪದವೀಧರ ಮತ್ತು ಶಿಕ್ಷಕರ ಪರಿಷತ್ ಚುನಾವಣೆಯು ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ನಡೆಯಲಿದೆ. ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯು ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ನಡೆಯಲಿದೆ. ಶಿಕ್ಷಕರ ಪಶ್ಚಿಮ ಕ್ಷೇತ್ರದ ಚುನಾವಣೆಯು ಧಾರವಾಡ, ಹಾವೇರಿ,ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ.

ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ರಜೆ : ಸೋಮವಾರ ಅಂದರೆ ಜೂನ್ 13ರಂದು ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಕಾಲೇಜುಗಳು, ಸೇರಿದಂತೆ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು, ಕಾರ್ಖಾನೆಗಳು ಮತ್ತು ಇತರ ಬ್ಯಾಂಕ್‍ಗಳು ಮತ್ತು ಖಾಸಗಿ ಕಾರ್ಖಾನೆಗಳಿಗೆ ವಿಶೇಷ ರಜೆ ಘೋಷಿಸಲಾಗಿದೆ.

Recent Articles

spot_img

Related Stories

Share via
Copy link
Powered by Social Snap