ಶಾಲೆಗಳಿಗೆ ಹುಸಿ ಬಾಂಬ್‌ ಕರೆ : ಆತಂಕ ಪಡುವ ಅಗತ್ಯವಿಲ್ಲ: ಡಿಕೆಶಿ

ಬೆಂಗಳೂರು:

     ನಗರದ ಸದಾಶಿವನಗರದಲ್ಲಿರುವ ನೀವ್ ಅಕಾಡೆಮಿ, ಬಸವೇಶ್ವರ ನಗರ, ಯಲಹಂಕ ವ್ಯಾಪ್ತಿಯಲ್ಲಿ ಸುಮಾರು 15 ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಶುಕ್ರವಾರ ಬೆಳ್ಳಂಬೆಳಗ್ಗೆ ಬೆದರಿಕೆ ಕರೆಗಳು ಬಂದವು. 

     ಈ ವಿಚಾರ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಡಿಸಿಎಂ ಡಿ ಕೆ ಶಿವಕುಮಾರ್ ಆತಂಕಗೊಂಡು ತಮ್ಮ ಮನೆ ಸದಾಶಿವನಗರದಲ್ಲಿರುವ ನೀಟ್ ಅಕಾಡೆಮಿಗೆ ಆಗಮಿಸಿದರು. ಶಾಲೆಗೆ ಬಂದು ಸ್ಥಳ ಪರಿಶೀಲನೆ ಮಾಡಿ ಇ ಮೇಲ್ ಕೂಡ ಪರಿಶೀಲಿಸಿದರು.

    ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಬಾಂಬ್ ಬೆದರಿಕೆ ಕರೆ ಬಂದು ಆತಂಕಗೊಂಡು ನಾನು ಕೂಡ ಸ್ಥಳಕ್ಕೆ ಧಾವಿಸಿ ಬಂದೆ. ಸದಾಶಿವನಗರದಲ್ಲಿ 24 ಗಂಟೆ ಪೊಲೀಸ್ ಭದ್ರತೆಯಿದೆ, ಹಾಗಾಗಿ ಪೋಷಕರು ಆತಂಕಪಡುವ ಅಗತ್ಯವಿಲ್ಲ. ಆದರೂ ಜಾಗ್ರತೆಯಿಂದಿರಬೇಕು.

   ಇಂತಹ ಬೆದರಿಕೆ ಕರೆಗಳು ಎಲ್ಲಿಂದ ಬರುತ್ತವೆ, ಯಾಕಾಗಿ ಬರುತ್ತವೆ ಎಂದು ತನಿಖೆ ಮಾಡಬೇಕು. ಪೊಲೀಸರು ಈಗಾಗಲೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಮಾಡಿ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಗೊತ್ತಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸಬೇಕು ಎಂದರು.

    ಸದಾಶಿವ ನಗರ ಮಾತ್ರವಲ್ಲ ನೀವ್ ಶಾಲೆಯ ಐದು ಶಾಲೆಗಳಲ್ಲೂ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಬಂದಿದೆ. ಬೆಳಗ್ಗೆ 6 ಗಂಟೆಗೆ ಶಾಲೆಯ ಇಮೇಲ್ ಗೆ ಮೆಸೇಜ್ ಬಂದಿದೆ. ಸದಾಶಿವನಗರ, ವೈಟ್ ಫೀಲ್ಡ್, ಕೋರಮಂಗಲ ಸೇರಿದಂತೆ ಐದು ಶಾಲೆಗಳಿಗೆ ಬೆದರಿಕೆ ಹಾಕಲಾಗಿದೆ. ಸದಾಶಿವನಗರದ ನೀವ್ ಶಾಲೆಯಲ್ಲಿ ಒಟ್ಟು 150 ಮಕ್ಕಳು ಓದುತ್ತಿದ್ದಾರೆ. ಬೆದರಿಕೆ ಬಳಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap