ತುಮಕೂರು:
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಗೌರಿಶಂಕರ್ ಅವರು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಮಾಜಿ ಶಾಸಕ ಬಿ.ಸುರೇಶ್ಗೌಡ ಆರೋಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಶಾಸಕ ಸುರೇಶ್ಗೌಡ ಅವರು, ಶಾಸಕ ಗೌರಿಶಂಕರ್ ಅವರು ತಾವು ಶಾಸಕರಾಗಿ ಮೂರು ತಿಂಗಳ ಅವಧಿಯಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ಮತ್ತು ಕಾಮಗಾರಿಗಳ ಕಮಿಷನ್ನಿಂದ ಒಟ್ಟು 8 ಕೋಟಿ ರೂ.ಗಳಷ್ಟು ಹಣವನ್ನು ಗಳಿಸಿದ್ದಾರೆ ಎಂದು ದೂರಿದರು.
ಗ್ರಾಮ ಪಂಚಾಯಿತಿ, ಕಂದಾಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಯಲ್ಲೂ ವರ್ಗಾವಣೆಗಾಗಿ ಹಣ ಪಡೆಯುತ್ತಿದ್ದಾರೆ. ಕೇವಲ ಮೂರೇ ತಿಂಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಎಸಗಿದ್ದಾರೆ. ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟೊಂದು ಭ್ರಷ್ಟಾಚಾರ ಮಾಡಿರುವುದು ಕರ್ನಾಟಕದ ಇತಿಹಾಸದಲ್ಲೇ ಮೊದಲು ಎಂದು ಆರೋಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/08/65-1.gif)