ಶಿಕ್ಷಣದಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ : ಶ್ರೀನಾಥ್.ಎಂ.ಜೋಷಿ

ಹಿರಿಯೂರು :

            ಶಿಕ್ಷಣದಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ, ಈ ನಿಟ್ಟಿನಲ್ಲಿ ಸಮಾಜದ ಎಲ್ಲಾ ಮಕ್ಕಳು ಸುಶಿಕ್ಷಿತರಾಗಬೇಕು ಆಗಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಬಹುದು ಎಂಬುದಾಗಿ ಚಿತ್ರದುರ್ಗ ಜಿಲ್ಲಾ ಪೊಲೀಸ್‍ವರಿಷ್ಠಾಧಿಕಾರಿ ಶ್ರೀನಾಥ್ ಎಂ ಜೋಷಿ ಹೇಳಿದರು.
ನಗರದಲ್ಲಿ ಪೊಲೀಸ್ ಉಪವಿಭಾಗದ ವತಿಯಿಂದ ಪೊಲೀಸ್ ಸಿಬ್ಬಂದಿ ಮಕ್ಕಳಿಗೆ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

            ಎಲ್ಲಾ ಪೋಷಕರಿಗೂ ತಮ್ಮ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು ಎಂಬ ಆಸೆ ಇರುತ್ತದೆ ಮಕ್ಕಳು ಪ್ರತೀ ವರ್ಷವೂ ತಮ್ಮ ಶಿಕ್ಷಣದ ಮಟ್ಟವನ್ನು ಹೆಚ್ಚಿಸುತ್ತಾ ಹೋಗಬೇಕು ಉತ್ತಮ ಶಿಕ್ಷಣ ಪಡೆದು ಹೆತ್ತ ತಂದೆ ತಾಯಿ ಪೋಷಕರಿಗೆ ಹಾಗೂ ತಾವು ಓದಿದ ಶಾಲೆಗೆ ಒಳ್ಳೆಯ ಹೆಸರು ತನ್ನಿ ಎಂದು ಕರೆ ನೀಡಿದರು.

            ಡಿ.ವೈ.ಎಸ್.ಪಿ ವೆಂಕಟಪ್ಪನಾಯಕರವರು ಮಾತನಾಡಿ ಪೊಲೀಸ್ ಸಿಬ್ಬಂದಿಯವರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹಕೊಡಬೇಕು ಎಂದರಲ್ಲದೆ ಈ ನಿಟ್ಟಿನಲ್ಲಿ ಮಕ್ಕಳಿಗೆ ಪ್ರೋತ್ಸಾಹ ನೀಡುವುದಕ್ಕಾಗಿ ಪ್ರತಿಭಾ ಪುರಸ್ಕಾರ ನೀಡಿತ್ತಾ ಬಂದಿದ್ದೇವೆ ಎಂದರು.

            ಈ ಸಂದರ್ಭದಲ್ಲಿ ಹಿರಿಯೂರು ವೃತ್ತ ನಿರೀಕ್ಷಕ ಕೆ.ಟಿ.ಗುರುರಾಜ್, ಹೊಸದುರ್ಗ ವೃತ್ತನಿರೀಕ್ಷಕ ರಮೇಶ್ ಮತ್ತು ಉಪ ವಿಭಾಗದ ಎಲ್ಲಾ ಪಿ.ಎಸ್.ಐ ರವರು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಕುಟುಂಬ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಕಛೇರಿ ಆವರಣದಲ್ಲಿ ಪ್ರತಿಷ್ಟಾಪಿಸಿರುವ ಗಣಪತಿಗೆ ಪೂಜೆ ಸಲ್ಲಿಸಿ, ಮುಖ್ಯಮಂತ್ರಿ ಪದಕ ಪುರಸ್ಕತರಾದ ವೃತ್ತನಿರೀಕ್ಷಕ ಕೆ.ಟಿ.ಗುರುರಾಜ್ ರವರಿಗೆ ಸನ್ಮಾನಿಸಲಾಯಿತು. ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಲಾಯಿತು. ನಂತರ ಸಾಂಸ್ಕತಿಕ ಕಾರ್ಯಕ್ರಮ ನಡೆಯಿತು.
  

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link