ಶಿಕ್ಷಣ ಜಾಗೃತಿ ಹರಿಕಾರರಿಂದ ಬೈಕ್ RALLY ಮೂಲಕ ಮತದಾನ ಜಾಗೃತಿ.

ಚಳ್ಳಕೆರೆ

        ಏಪ್ರೀಲ್-18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಮತದಾನದಲ್ಲಿ ಹೆಚ್ಚು ಪಾಲ್ಗೊಳ್ಳುವಂತೆ ಜಾಗೃತಿಗೊಳಿಸಲು ತಾಲ್ಲೂಕು ಸ್ವೀಫ್ ಸಮಿತಿ ಆಶ್ರಯದಲ್ಲಿ ಶಿಕ್ಷಕರ ಸಹಕಾರದಿಂದ ಶನಿವಾರ ಮೋಟಾರ್ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.

        ನಗರದ ಪ್ರವಾಸಿ ಮಂದಿರದ ಬಳಿ ಶಿಕ್ಷಕರ ಮತದಾರರ ಜಾಗೃತಿ ಮೋಟಾರ್ ಬೈಕ್ ರ್ಯಾಲಿಗೆ ತಹಶೀಲ್ದಾರ್ ತುಷಾರ್ ಬಿ.ಹೊಸೂರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜಕ್ಕೆ ಜ್ಞಾನದ ಬೆಳಕನ್ನು ನೀಡುವ ಶಿಕ್ಷಕ ವೃಂದ ಇಂದು ರಾಷ್ಟ್ರಕ್ಕೆ ಬೆಳಕು ನೀಡುವ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರನ್ನು ವಿನಂತಿಸಲು ಮೋಟಾರ್ ಬೈಕ್ ರ್ಯಾಲಿ ಹಮ್ಮಿಕೊಂಡಿದೆ. ಶಿಕ್ಷಕ ಸಮೂಹದ ಈ ಕಾರ್ಯಕ್ರಮಕ್ಕೆ ನಾನು ಅಭಿನಂದಿಸುತ್ತೇನೆ. ಇಂದಿನ ಬೈಕ್ ರ್ಯಾಲಿಯಲ್ಲಿ ನೂರಾರು ಶಿಕ್ಷಕರು ಸ್ವಯಂ ಪ್ರೇರಿತರಾಗಿ ಭಾಗವಹಿಸಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕ ಜಾಗೃತಿ ಮೂಡಿಸಿರುವುದು ಸಂತಸ ತಂದಿದೆ. ಪ್ರತಿಯೊಂದು ಸರ್ಕಾರದ ಕಾರ್ಯಕ್ರಮಗಳಲ್ಲಿ ಶಿಕ್ಷಕರ ಸಹಭಾಗಿತ್ವ ಹೆಚ್ಚಿರುತ್ತದೆ ಎಂದರು.

        ತಾಲ್ಲೂಕು ಸ್ವೀಫ್ ಸಮಿತಿ ಅಧ್ಯಕ್ಷ ಬಿ.ಎಲ್.ಈಶ್ವರಪ್ರಸಾದ್ ಮಾತನಾಡಿ, ತಾಲ್ಲೂಕಿನಾದ್ಯಂತ ಶಿಕ್ಷಕರ ಸಂಖ್ಯೆ ಹೆಚ್ಚಿದ್ದು, ಈ ಕಾರ್ಯಕ್ರಮದಲ್ಲಿ ನಗರ ಮಟ್ಟದ ಶಿಕ್ಷಕರು ಮಾತ್ರ ಪಾಲ್ಗೊಳ್ಳಲು ಇಂದು ಸಾಧ್ಯವಾಗಿದೆ. ಇಡೀ ಶಿಕ್ಷಕ ಸಮೂಹವೇ ಪಾಲ್ಗೊಂಡಿದ್ದರೆ ಈ ಕಾರ್ಯಕ್ರಮಕ್ಕೆ ಇನ್ನೂ ಹೆಚ್ಚಿನ ಮಹತ್ವ ದೊರೆಯುತ್ತಿತ್ತು. ಆದರೂ ಸಹ ಈ ದಿನ ನೂರಾರು ಶಿಕ್ಷಕರು, ವಿದ್ಯಾರ್ಥಿಗಳು ಮತದಾನ ಮಾಡುವ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದು, ತಾಲ್ಲೂಕು ಸ್ವೀಫ್ ಸಮಿತಿ ಪರವಾಗಿ ಎಲ್ಲಾ ಶಿಕ್ಷಕರನ್ನು ಅಭಿನಂದಿಸುವುದಾಗಿ ತಿಳಿಸಿದರು.

       ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ವೆಂಕಟೇಶಪ್ಪ ಮಾತನಾಡಿ, ಶಿಕ್ಷಕರು ಇಂದು ಕೇವಲ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡುವುದಲ್ಲದೆ ತಮ್ಮ ಮೇಲಿರುವ ಸಾಮಾಜಿಕ ಕಳಕಳಿಯನ್ನು ಈ ರ್ಯಾಲಿಯ ಮೂಲಕ ವ್ಯಕ್ತ ಪಡಿಸಿದ್ಧಾರೆ. ಉತ್ತಮ ಸರ್ಕಾರ ಆಡಳಿತಕ್ಕೆ ಬಂದಲ್ಲಿ ಸಮಾಜದ ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ದೊರೆಯುತ್ತದೆ. ಮತದಾನದ ಮೂಲಕ ಉತ್ತಮ ಸರ್ಕಾರ ಆಡಳಿತಕ್ಕೆ ಬರಲು ಮತದಾರರೇ ಮೂಲ ಕಾರಣರು. ಈ ಹಿನ್ನೆಲೆಯಲ್ಲಿ ಹೆಚ್ಚು ಮತದಾನ, ಹೆಚ್ಚು ಮತದಾರರಿಂದ ಆಗುವಂತೆ ಪ್ರೇರೇಪಣೆ ನೀಡಲು ಈ ಕಾರ್ಯಕ್ರಮವನ್ನು ಶಿಕ್ಷಕರು ಹಮ್ಮಿಕೊಂಡಿದ್ದರು. ಇದಕ್ಕೆ ಸಹಕಾರ ನೀಡಿದ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳನ್ನು ಶಿಕ್ಷಣ ಇಲಾಖೆಯ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದರು.

         ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಅಧಿಕಾರಿ ತಿಪ್ಪೇಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ಮಂಜಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಾಲತಿ, ಸಿಡಿಪಿಒ ಗಿರಿಜಾಂಬ, ಪೌರಾಯುಕ್ತ ಪರಮೇಶ್ವರಪ್ಪ, ಮುಖ್ಯ ಶಿಕ್ಷಕರಾದ ಸಂಪತ್‍ಕುಮಾರ್, ಜಿ.ಟಿ.ವೀರಭದ್ರಪ್ಪ, ಗುರುಮೂರ್ತಿ, ತಿಪ್ಫೇಸ್ವಾಮಿ, ಚನ್ನಬಸಪ್ಪ, ರುದ್ರಮೂರ್ತಿ, ಬಸವರಾಜು, ಗುರುಸಿದ್ದಮೂರ್ತಿ ಮುಂತಾದವರು ಉಪಸ್ಥಿತರಿದ್ದರು. ಬೈಕ್ ರ್ಯಾಲಿ ನಗರದ ಪ್ರವಾಸಿ ಮಂದಿರದಿಂದ ವಾಲ್ಮೀಕಿ ವೃತ್ತ, ಅಂಬೇಡ್ಕರ್ ವೃತ್ತ, ನೆಹರೂ ವೃತ್ತದ ಮೂಲಕ ತಾಲ್ಲೂಕು ಕಚೇರಿಗೆ ಆಗಮಿಸಿ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಜ್ಞಾ ವಿಧಿ ಬೋದಿನೆಯೊಂದಿಗೆ ರ್ಯಾಲಿಯನ್ನು ಮುಕ್ತಾಯಗೊಳ್ಳಿಸಲಾಯಿತು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link