ಬೆಂಗಳೂರು:
ವಿಧಾನಸೌಧದ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ಫೋಟೋಗಳ ಜೊತೆಗೆ ನಡೆದಾಡುವ ದೇವರು ಶ್ರೀ ಶಿವಕುಮಾರ್ ಸ್ವಾಮೀಜಿಗಳ ಫೋಟೋವನ್ನು ಕೂಡ ತೆಗೆದು ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ವಿಧಾನಸೌಧ 3ನೇ ಮಹಡಿಯ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ಕೆ.ಎನ್.ರಾಜಣ್ಣ ಅವರ ಕಚೇರಿಗಳಿಂದ ಮಾಜಿ ಸಿಎಂಗಳಾದ ಎಚ್‌ಡಿ ಕುಮಾರಸ್ವಾಮಿ, ಬಿಎಸ್ ಬೊಮ್ಮಾಯಿ ಮತ್ತು ಶ್ರೀ ಶಿವಕುಮಾರ ಸ್ವಾಮೀಜಿ ಅವರ ಫೋಟೋಗಳನ್ನು ತೆರವುಗೊಳಿಸಿದರು. ಇದೇ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ಮಾಡಿ, ‘ಇದು ಅಹಂಕಾರದ ಅಹಂಕಾರದ ಪರಮಾವಧಿ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.
‘ಆಡಳಿತ ಪಕ್ಷ ಕಾಂಗ್ರೆಸ್ ಸರಕಾರಕ್ಕೆ ಕೇಸರಿ ಎಂದರೆ ದ್ವೇಷ ಮತ್ತು ಶತ್ರುಭಾವ. ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ ಪರಮ ಪೂಜ್ಯನೀಯ ಡಾ। ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜ್ಯದ ಜನತೆಯ ಕ್ಷಮೆ ಕೋರಬೇಕು. ಜತೆಗೆ ಡಾ। ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ಸಕಲ ಗೌರವಗಳೊಂದಿಗೆ ಪುನಃ ಕೊಠಡಿಯೊಳಗೆ ಲಗತ್ತಿಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
