ಶಿವಮೊಗ್ಗ : ಡಿಸಿಸಿ ಬ್ಯಾಂಕ್‌ ಅಧ್ಯಕ್ಷರ ಮನೆ ಮೇಲೆ ಇಡಿ ದಾಳಿ

ಶಿವಮೊಗ್ಗ:

     ಡಿಸಿಸಿ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ  ನಕಲಿ ಚಿನ್ನಾಭರಣ ಅಡವಿಟ್ಟುಕೊಂಡು ಸಾಲ ನೀಡಿದ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಕಾಂಗ್ರೆಸ್ ಮುಖಂಡ ಮತ್ತು ಶಿವಮೊಗ್ಗ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್‌ನ ಅಧ್ಯಕ್ಷ ಆರ್‌ಎಂ ಮಂಜುನಾಥ್ ಗೌಡ ಅವರ ಮನೆ, ಕಚೇರಿ ಮೇಲೆ ಗುರುವಾರ ದಾಳಿ ನಡೆಸಿತು.

ಶಿವಮೊಗ್ಗದ ಶರಾವತಿ ನಗರದಲ್ಲಿನ ನಿವಾಸ ಮತ್ತು ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕರಕುಚ್ಚಿ ಬಳಿಯ ಅವರ ತೋಟದ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳು ಇನ್ನೂ ಶೋಧ ನಡೆಸುತ್ತಿದ್ದಾರೆ.

ನಕಲಿ ಚಿನ್ನದ ಆಭರಣ ಅಡವಿಟ್ಟುಕೊಂಡ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಇತ್ತೀಚೆಗಷ್ಟೇ ಶಿವಮೊಗ್ಗ ಡಿಸಿಸಿ ಬ್ಯಾಂಕಿನಿಂದ ಕೆಲವು ದಾಖಲೆಗಳನ್ನು ಕೇಳಿತ್ತು. 

 

ಮಂಜುನಾಥ್ ಗೌಡ ಅವರು ನಕಲಿ ಚಿನ್ನವನ್ನು ಅಡವಿಟ್ಟುಕೊಂಡು ಸಾಲ ನೀಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ಈ ಅಕ್ರಮಗಳಿಂದ ಬ್ಯಾಂಕ್‌ಗೆ 62 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ತನಿಖೆಯಲ್ಲಿ ಹೇಳಲಾಗಿದೆ. 

ಶಿವಮೊಗ್ಗ ಪೊಲೀಸರು 2014ರ ಆಗಸ್ಟ್‌ನಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ಮಂಜುನಾಥ ಗೌಡ ಸೇರಿದಂತೆ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ (ಎಸ್‌ಡಿಸಿಸಿಬಿ) 18 ಸಿಬ್ಬಂದಿಯನ್ನು ಬಂಧಿಸಿದ್ದರು.

ಮಂಜುನಾಥ ಗೌಡ ಮತ್ತು ಬ್ಯಾಂಕ್ ಉದ್ಯೋಗಿಗಳ ವಿರುದ್ಧ ನಕಲಿ ಚಿನ್ನವನ್ನು ಅಡವಿಟ್ಟುಕೊಂಡು ಸಾಲ ನೀಡಿದ ಆರೋಪ ಹೊರಿಸಲಾಗಿತ್ತು ಮತ್ತು ಇನ್ನೂ ಕೆಲವು ಪ್ರಕರಣಗಳಲ್ಲಿ ಸಾಲ ಪಡೆಯಲು ಚಿನ್ನವನ್ನು ಅಡವಿಟ್ಟಿರಲಿಲ್ಲ.

ಮಂಜುನಾಥ ಗೌಡ ಅವರು ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ಬಳಗದಲ್ಲಿ ಪ್ರಮುಖರು ಎಂದು ಹೇಳಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap