ತಿಪಟೂರು
ನಗರದ ಕೋಟೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ವೃಂದಾವನದಲ್ಲಿ 347ನೇ ಆರಾಧನಾ ಮಹೋತ್ಸವದ ಅಂಗವಾಗಿ ಸ್ವಾಮಿಯವರಿಗೆ ವಿಶೇಷ ಪೂಜಾಕಾರ್ಯಕ್ರಮಗಳಾದ ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಕನಕಾಭಿಷೇಕ, ಅಷ್ಟೋತ್ತರ ಸೇವೆಗಳನ್ನು ನೆರವೇರಿಸಿ, ಹೂವಿನ ಅಲಂಕಾರ ಮಾಡಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದು ಪುನೀತರಾದರು. ಭಕ್ತಾದಿಗಳಿಗೆ ಅನ್ನಸಂತರ್ಪಣೆಯನ್ನು ಮಾಡಲಾಯಿತು.
